ಶಿವಮೊಗ್ಗ: ಪ್ರತ್ಯೇಕ ಪ್ರಕರಣಗಳಲ್ಲಿ ಕೋರ್ಟ್ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ಫೋಕ್ಸೊ ಪ್ರಕರಣದಲ್ಲಿ ಶಿಕಾರಿಪುರದ ನರಸಿಂಹ (29) ಎಂಬಾತ ತಲೆ ಮರೆಸಿಕೊಂಡಿದ್ದ. ಈ ಕುರಿತು ಶಿಕಾರಿಪುರ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಶಿಕಾರಿಪುರ ಪಿಎಸ್ಐ ರಾಜುರೆಡ್ಡಿ ಬೆನ್ನೂರು ಅವರ ನೇತೃತ್ವದ ತಂಡ ನರಸಿಂಹನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅದೇ ರೀತಿ ಎರಡು ವರ್ಷಗಳಿಂದ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಪ್ರಕರಣದ ಆರೋಪಿ ರವಿ ನಾಯ್ಕ(29)ನನ್ನು ಬಂಧಿಸಲಾಗಿದೆ. ರವಿನಾಯ್ಕ ಚನ್ನಗಿರಿಯ ನಿವಾಸಿಯಾಗಿದ್ದು, 2016 ರ ಪ್ರಕರಣದಲ್ಲಿ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ.
ಈ ಕುರಿತು ನ್ಯಾಯಾಲಯ ವಾರಂಟ್ ಹೊರಡಿಸಿದ್ದು, ಮಹಿಳಾ ಸಿಪಿಐ ಅಭಯ್ ಪ್ರಕಾಶ್ ಸೋಮನಾಳ್ ಹಾಗೂ ಹೆಡ್ ಕಾನ್ಸ್ಟೇಬಲ್ ಗಂಗಾಧರ್ ತಂಡ ರವಿನಾಯ್ಕನನ್ನು ಬಂಧಿಸಿ, ಶಿವಮೊಗ್ಗ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.