ETV Bharat / state

ಶಕ್ತಿ ಯೋಜನೆ: ಶಿವಮೊಗ್ಗದಲ್ಲಿ ಪ್ರಯಾಣಿಸಿದ ಮಹಿಳೆಯರೆಷ್ಟು? - ಸಬಲೀಕರಣಗೊಂಡ ಮಹಿಳೆಯರ ಪಯಣ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ (ಮಹಿಳೆಯರಿಗೆ ಫ್ರೀ ಬಸ್‌ ಸೌಲಭ್ಯ) ರಾಜ್ಯಾದ್ಯಂತ ಉತ್ತಮ ಸ್ಪಂದನೆ ಸಿಕ್ಕಿದೆ. ಶಿವಮೊಗ್ಗದ ವರದಿ ಇಲ್ಲಿದೆ.

ಶಕ್ತಿ ಯೋಜನೆ
ಶಕ್ತಿ ಯೋಜನೆ
author img

By ETV Bharat Karnataka Team

Published : Aug 24, 2023, 8:20 PM IST

ಶಿವಮೊಗ್ಗ : ಜೂನ್ 11 ರಂದು ಜಾರಿಗೆ ತಂದ ಶಕ್ತಿ ಯೋಜನೆಯ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಯೋಜನೆಗೆ ಉತ್ತಮ ಪ್ರತಿಕ್ರಿಯೆ ಮತ್ತು ಸಕಾರಾತ್ಮಕ ಸ್ಪಂದನೆ ದೊರೆತಿದೆ.

ಶಿವಮೊಗ್ಗ- ಮಹಿಳೆಯರ ಬಸ್‌ ಪ್ರಯಾಣದ ವಿವರ: ಈ ತಿಂಗಳಲ್ಲಿ ಶಿವಮೊಗ್ಗ ವಿಭಾಗದಲ್ಲಿ ಒಟ್ಟು 12,39,661 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, 4,25,35,743 ರೂ. ವೆಚ್ಚವನ್ನು ಸರ್ಕಾರ ಭರಿಸಲಿದೆ. ಜುಲೈನಲ್ಲಿ 24,01,146 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ತಿಂಗಳ ವೆಚ್ಚ 7,62,79,165 ರೂ. ಆಗಿದೆ. ಆಗಸ್ಟ್ 22 ರವರೆಗೆ 16,64,330 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, 5,46,26,015 ರೂ. ವೆಚ್ಚ ಸೇರಿದಂತೆ ಒಟ್ಟಾರೆ ಜುಲೈ 11 ರಿಂದ ಆಗಸ್ಟ್ 22 ರವರೆಗೆ 53,05,137 ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು 17,34,40,923 ರೂ. ವೆಚ್ಚವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸರ್ಕಾರ ಭರಿಸಲಿದೆ ಎಂದು ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಕ ವಿಜಯಕುಮಾರ್ ತಿಳಿಸಿದ್ದಾರೆ.

ಈ ಯೋಜನೆ ಅನುಷ್ಠಾನದ ನಂತರ ನೂಕುನುಗ್ಗಲು ತಪ್ಪಿಸಲು, ಅಹಿತಕರ ಘಟನೆಗಳು ನಡೆಯದಂತೆ ಸೂಪರ್‍ವೈಸರ್‌ಗಳನ್ನು ನಿಯೋಜಿಸಿ ಕ್ರಮ ವಹಿಸಲಾಗಿದೆ. ವಿಶೇಷ ಜಾತ್ರೆ/ ಹಬ್ಬವಿರುವ ದಿನಗಳನ್ನು ಗುರುತಿಸಿ ಪ್ರಯಾಣಿಕರ ಸಂದಣಿ ಅನುಗುಣವಾಗಿ ಘಟಕದಿಂದ ಹೆಚ್ಚುವರಿ ಬಸ್​ಗಳ ತ್ವರಿತ ನಿಯೋಜನೆ, ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಯೋಜನೆಯ ಸದುಪಯೋಗ ಹೇಗೆ?: ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್​ನಲ್ಲಿ ಪ್ರಯಾಣ ಮಾಡಬಹುದು. ಇದಕ್ಕಾಗಿ ಶಕ್ತಿ ಸ್ಮಾಟ್ ಕಾರ್ಡ್ ನೀಡಲಾಗುತ್ತದೆ. ಸ್ಮಾರ್ಟ್ ಕಾರ್ಡ್‍ಗಳಿಗಾಗಿ ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಕಾರ್ಡ್ ಪಡೆಯುವತನಕ ಪ್ರಯಾಣಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿ ಪತ್ರ, ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಸಂಸ್ಥೆಗಳು ವಿತರಿಸುವ ಗುರುತಿನ ಚೀಟಿ ಹಾಗೂ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಕಲ್ಯಾಣ ನಿರ್ದೇಶನಾಲಯದ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು. ಮಹಿಳಾ ಪ್ರಯಾಣಿಕರು ಪ್ರಯಾಣ ಸಂದರ್ಭದಲ್ಲಿ ಶೂನ್ಯ ಮೊತ್ತ ಟಿಕೆಟ್ ಪಡೆದುಕೊಳ್ಳಬೇಕು. ಈ ಯೋಜನೆ ರಾಜ್ಯದೊಳಗೆ ಪ್ರಯಾಣಿಸಲು ಮಾತ್ರ ಅನ್ವಯ. ಅಂತರರಾಜ್ಯ ಪ್ರಯಾಣಕ್ಕೆ ಅವಕಾಶವಿಲ್ಲ.

ಪುರುಷ ಪ್ರಯಾಣಿಕರಿಗೆ ಆಸನ ಮೀಸಲು: ಕೆಎಸ್​ಆರ್​ಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್​ಗಳಲ್ಲಿ(ಅಂತರರಾಜ್ಯ, ಎಸಿ ಮತ್ತು ಐಷಾರಾಮಿ ಬಸ್‍ಗಳನ್ನು ಹೊರತುಪಡಿಸಿ) ಶೇ.50 ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಲಾಗುತ್ತಿದೆ. ಮುಂಗಡ ಬುಕಿಂಗ್ ಸೌಲಭ್ಯವಿರುವ ಬಸ್​ಗಳಲ್ಲಿ ಮಹಿಳೆಯರಿಗೆ ಮುಂಗಡ ಆಸನ ಕಾಯ್ದಿರಿಸುವ ಅವಕಾಶವಿದೆ.

ಇದನ್ನೂ ಓದಿ : ಮೈಸೂರಿನಲ್ಲಿ 3,200 ಉದ್ಯೋಗ ಸೃಷ್ಟಿಯ ಸೆಮಿ ಕಂಡಕ್ಟರ್‌ ಘಟಕ ಸ್ಥಾಪನೆ ಒಡಂಬಡಿಕೆಗೆ ಸಹಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.