ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಅಗಸ್ಟ್ 4ರಂದು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಎಸ್ ಸುಂದ್ರೇಶ್ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ತಡೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿರುವುದನ್ನು ಕುರಿತು ಹಾಗೂ ಕೊರೊನಾ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಭ್ರಷ್ಟಾಚಾರ ಹಾಗೂ ಲಾಕ್ಡೌನ್ ಸಮಯದಲ್ಲಿ ಸುಗ್ರೀವಾಜ್ಞೆ ಹೊರಡಿಸಿ ಈಗ ತಂದಿರುವ ಕಾಯ್ದೆಗಳ ಕುರಿತು ಸುದ್ದಿಗಾರರೊಂದಿಗೆ ಮಾತನಾಡಲು ಶಿವಮೊಗ್ಗಕ್ಕೆ ಅಗಸ್ಟ್ 4ರಂದು ಆಗಮಿಸುತ್ತಿದ್ದಾರೆ.
ಅಂದು 11ಗಂಟೆಗೆ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಎಲ್ಲಾ ವಿಷಯಗಳ ಕುರಿತು ಮಾತನಾಡಲಿದ್ದಾರೆ. ನಂತರ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಯಾವುದೇ ಬಹಿರಂಗ ಸಭೆ ಇಲ್ಲ ಎಂದರು.
ಸಿದ್ದರಾಮಯ್ಯನವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಅವರು ಸಹ ನಗರಕ್ಕೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.