ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು ಕಾಂಗ್ರೆಸ್ ನಾಯಕರನ್ನು ಬೈಯ್ಯುವುದನ್ನು ಬಿಟ್ಟು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪನವರು, ಸಿದ್ದರಾಮಯ್ಯ ಸೇರಿದಂತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕರನ್ನು ಬೈಯ್ಯುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದ ಭತ್ತ, ಜೋಳ, ಅಡಿಕೆ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ. ಆದರೂ ಸಹ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಶ್ವರಪ್ಪನವರು ಹಿರಿಯರಿದ್ದಾರೆ. ಅವರು ಐದಾರು ಬಾರಿ ಶಾಸಕರಾಗಿ ಮಂತ್ರಿಗಳಾಗಿದ್ದಾರೆ. ಅವರು ಬೈಯ್ಯುವುದನ್ನೇ ಕೆಲಸ ಮಾಡಿಕೊಳ್ಳಬಾರದು ಎಂದು ಸಲಹೆ ನೀಡಿದರು. ಅವರಂತೆ ನಮಗೂ ಬೈಯ್ಯಲು ಬರುತ್ತದೆ ಎಂದರು.