ETV Bharat / state

ಶಿವಮೊಗ್ಗ: ಕೊರೊನಾಗೆ ಇಂದು ಓರ್ವ ಬಲಿ.. ಅಂತ್ಯಕ್ರಿಯೆಗೆ ಸ್ಥಳೀಯರ ವಿರೋಧ

author img

By

Published : Jul 9, 2020, 12:10 AM IST

ಶಿವಮೊಗ್ಗ ಜಿಲ್ಲೆಯಲ್ಲಿಂದು ಕೊರೊನಾಗೆ ಓರ್ವ ವ್ಯಕ್ತಿ ಬಲಿಯಾಗಿದ್ದು, ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಕೋವಿಡ್-19 ಮಾರ್ಗಸೂಚಿಯಂತೆ ಇವರ ಅಂತ್ಯಕ್ರಿಯೆ ನಡೆಸಲು ರೋಟರಿ ಚಿತಗಾರಕ್ಕೆ ತೆಗೆದುಕೊಂಡು ಬಂದಾಗ ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ರು.

ಅಂತ್ಯಕ್ರಿಯೆಗೆ ಸ್ಥಳೀಯರ ವಿರೋಧ
ಅಂತ್ಯಕ್ರಿಯೆಗೆ ಸ್ಥಳೀಯರ ವಿರೋಧ

ಶಿವಮೊಗ್ಗ: ಜಿಲ್ಲೆಯಲ್ಲಿಂದು ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ನಗರದ ರೋಟರಿ ಚಿತಾಗಾರದಲ್ಲಿ ನಡೆಸಲಾಯಿತು. ಆದ್ರೆ ಚಿತಾಗಾರಕ್ಕೆ ಶವವನ್ನು ತೆಗೆದುಕೊಂಡು ಬಂದಾಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಘಟನೆ ನಡೆಯಿತು.

ಶಿವಮೊಗ್ಗದಲ್ಲಿ ಕೊರೊನಾಗೆ ಇಂದು ಓರ್ವ ಬಲಿ

ಕೋವಿಡ್-19ಗೆ ಜಿಲ್ಲೆಯಲ್ಲಿ ಇದುವರೆಗೂ ಆರು ಜನ ಬಲಿಯಾಗಿದ್ದಾರೆ. ಶಿವಮೊಗ್ಗ ರವಿವರ್ಮ ಬೀದಿಯ ರೋಗಿ-16647 ಇಂದು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇವರಲ್ಲಿ ಸೋಂಕು ಕಂಡುಬಂದ ಬಳಿಕ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾತ್ರಿ ಚೆನ್ನಾಗಿಯೇ ಇದ್ದ 70 ವರ್ಷದ ವ್ಯಕ್ತಿ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕೋವಿಡ್-19 ಮಾರ್ಗಸೂಚಿಯಂತೆ ಇವರ ಅಂತ್ಯಕ್ರಿಯೆ ನಡೆಸಲು ರಾಜೀವ್​ ಗಾಂಧಿ ಬಡಾವಣೆ ಪಕ್ಕದ ರೋಟರಿ ಚಿತಾಗಾರಕ್ಕೆ ತೆಗೆದುಕೊಂಡು ಬಂದಾಗ ಸ್ಥಳೀಯರು ಕೊರೊನಾ ರೋಗಿಯನ್ನು ಇಲ್ಲಿಗೆ ಏಕೆ ತಂದಿದ್ದೀರಿ. ಬೇರೆ ಕಡೆ ಶವ ಸಂಸ್ಕಾರ ಮಾಡಬಹುದಾಗಿತ್ತು ಎಂದು ಆರೋಗ್ಯ ಇಲಾಖೆಯವರಿಗೆ ರಾಜೀವ್ ಗಾಂಧಿ ಬಡಾವಣೆಯವರು ತರಾಟೆಗೆ ತೆಗೆದುಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.