ಶಿವಮೊಗ್ಗ : ಜಿಲ್ಲೆಯ 271 ಗ್ರಾಮ ಪಂಚಾಯತ್ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ಈ ಅಧಿಕಾರಿಗಳು ಮುಂದೆ ಗ್ರಾಮ ಪಂಚಾಯತ್ ಚುನಾವಣೆ ನಡೆದು ಹೊಸ ಆಡಳಿತ ಮಂಡಳಿ ಅಧಿಕಾರಕ್ಕೆ ಬರುವವರೆಗೂ ಮುನ್ನಡೆಸಲಿದ್ದಾರೆ.
ಜಿಲ್ಲೆಯ 271 ಗ್ರಾಮ ಪಂಚಾಯತ್ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವುದು ಮಾತ್ರವಲ್ಲದೆ, ಗ್ರಾಮ ಪಂಚಾಯತ್ಗಳನ್ನು ಹೇಗೆ ಮುನ್ನಡೆಸಬೇಕು ಎಂಬುದರ ಕುರಿತು ಸೂಕ್ತ ತರಬೇತಿಯನ್ನೂ ನೀಡಲಾಗುತ್ತಿದೆ.
ಪ್ರಸ್ತುತ ಕೊರೊನಾ ಸಂದರ್ಭವನ್ನು ಸಮರ್ಥವಾಗಿ ಎದುರಿಸಲು ಹೇಗೆ ಕಾರ್ಯನಿರ್ವಹಿಸಬೇಕು, ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಯಾವ ರೀತಿ ಪರಿಹರಿಸಬೇಕು, ಯಾವ ಕೆಲಸಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು ಎಂಬ ಕುರಿತು ತರಬೇತಿ ನೀಡಲಾಗುತ್ತಿದೆ.