ETV Bharat / state

ಸಚಿವರಾಗಿ ಜಿಲ್ಲೆಗೆ ಆಗಮಿಸಿದ ಈಶ್ವರಪ್ಪಗೆ ಅದ್ಧೂರಿ ಸ್ವಾಗತ ಕೋರಿದ ಕಾರ್ಯಕರ್ತರು - ಶಿವಮೊಗ್ಗಕ್ಕೆ ಆಗಮಿಸಿದ್ದ ಈಶ್ವರಪ್ಪ

ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಕೆಎಸ್​ ಈಶ್ವರಪ್ಪನವರು ಇಂದು ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು.

Shimoga BJP Activists welcome new Minister KS Eshwarappa
ಈಶ್ವರಪ್ಪನವರಿಗೆ ಅದ್ಧೂರಿ ಸ್ವಾಗತ ಕೋರಿದ ಕಾರ್ಯಕರ್ತರು
author img

By

Published : Aug 5, 2021, 7:41 PM IST

ಶಿವಮೊಗ್ಗ: ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾದ ಕೆಎಸ್​ ಈಶ್ವರಪ್ಪ ಇಂದು ಜಿಲ್ಲೆಗೆ ಆಗಮಿಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.

ಸಚಿವ ಈಶ್ವರಪ್ಪಗೆ ನಗರದ ಎಂಆರ್​​​ಎಸ್ ಸರ್ಕಲ್​​ನಲ್ಲಿ ಹೂವಿನ ಹಾರ ಹಾಕಿ ಹೆಗಲ ಮೇಲೆ ನಾಯಕನನ್ನು ಕೂರಿಸಿಕೊಂಡು ಕಾರ್ಯಕರ್ತರು ಮೆರವಣಿಗೆ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದರು.

ಈಶ್ವರಪ್ಪನವರಿಗೆ ಅದ್ಧೂರಿ ಸ್ವಾಗತ ಕೋರಿದ ಕಾರ್ಯಕರ್ತರು

ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ನನ್ನ ಎಲ್ಲ ಕಾರ್ಯಕರ್ತರು ಹಾಗೂ ಜನರ ಆಶಿರ್ವಾದ, ಹಾರೈಕೆಯಿಂದ ಇಂದು ಸಚಿವನಾಗಿದ್ದೇನೆ. ಮುಂಬರುವ ದಿನಗಳಲ್ಲಿ ರಾಜ್ಯ, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು. ಈ ವೇಳೆ, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಬಿಜೆಪಿ ಪಕ್ಷದ ಮುಖಂಡರಾದ ಚನ್ನಬಸಪ್ಪ, ನಗರಶಧ್ಯಕ್ಷ ಜಗದೀಶ್, ಸಂತೋಷ ಬಳ್ಳಕೇರೆ, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ಕೆಟ್ಟ ಕನಸುಗಾರ:

ಬಿಜೆಪಿ ಸರ್ಕಾರ ಬಿದ್ದು ಹೋಗುತ್ತೆ, ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಒಬ್ಬ ಕೆಟ್ಟ ಕನಸುಗಾರ. ಎಲ್ಲರಿಗೂ ಒಳ್ಳೆಯ ಕನಸು ಬಿದ್ದರೆ ಅವರಿಗೆ ಕೆಟ್ಟ ಕನಸು ಬಿಳುತ್ತದೆ. ಹಾಗಾಗಿ ಅವರ ಕನಸು ಈ ಜನ್ಮದಲ್ಲಿ ನನಸು ಆಗುವುದಿಲ್ಲ ಎಂದರು.

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲ್ಲ. ಆದರೂ ಅವರು ಕನಸು ಕಾಣುವುದನ್ನು ಬಿಡುವುದಿಲ್ಲ. ಸರ್ಕಾರ ಬಿದ್ದು ಹೋಗುತ್ತದೆ. ತಾನೇ ಹೋಗಿ ಮುಖ್ಯಮಂತ್ರಿ ಖುರ್ಚಿ ಮೇಲೆ ಕೂರಬಹುದು ಎಂದುಕೊಂಡಿದ್ದಾರೆ. ಆದರೆ, ಈ ಜನ್ಮದಲ್ಲಿ ಅದು ಈಡೇರಲ್ಲ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪೂರ್ಣ ಅವಧಿ ಪೂರೈಸಲಿದೆ. ಮುಂದೆಯು ಸಂಘಟನೆ ಮೂಲಕ ನಮ್ಮ ಸರ್ಕಾರ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆ ಎಸ್​ ಈಶ್ವರಪ್ಪ

ಕೈ ಪಕ್ಷ ಎಷ್ಟು ಜನರಿಗೆ ಸ್ಥಾನ ನೀಡಿತ್ತು:

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಎಷ್ಟು ಜನ ದಲಿತರಿಗೆ ಮುಖ್ಯಮಂತ್ರಿ ಮಾಡಿದೆ. ಕಾಂಗ್ರೆಸ್​​ ಅಧಿಕಾರದಲ್ಲಿದ್ದಾಗ ಎಷ್ಟು ಜನ ದಲಿತರಿಗೆ ಸಚಿವ ಸ್ಥಾನ ನೀಡಿತ್ತು. ಬಿಜೆಪಿ ಸರ್ಕಾರದಲ್ಲಿ ನಾಲ್ಕು ಜನ ದಲಿತರಿಗೆ ಸಚಿವ ಸ್ಥಾನ ನೀಡಿದ್ದೇವೆ. ಕೇಂದ್ರದಲ್ಲಿ ಇದೇ ಮೊದಲ ಬಾರಿಗೆ 47 ಜನ ದಲಿತರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದರು.

ಓದಿ: ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ.. ಸರ್ಕಾರದಿಂದ ಆದೇಶ

ಖಾತೆ ಹಂಚಿಕೆ ವಿಚಾರ:

ಖಾತೆ ಹಂಚಿಕೆ ವಿಚಾರವಾಗಿ ಮಾತನಾಡಿ, ನನಗೆ ಇಂತಹದ್ದೇ ಖಾತೆ ಬೇಕು ಎಂದು ಬೇಡಿಕೆ ಇಟ್ಟಿಲ್ಲ. ಕೇಂದ್ರದ ನಾಯಕರು, ಹೈಕಮಾಂಡ್ ನನಗೆ ಯಾವ ಖಾತೆ ಕೊಟ್ಟರು ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ. ಈ ಹಿಂದೆ ಜಲ ಸಂಪನ್ಮೂಲ, ಇಂಧನ, ಕಂದಾಯ, ಗ್ರಾಮೀಣಾಭಿವೃದ್ಧಿ ಖಾತೆ ನಿರ್ವಹಿಸಿದ್ದೇನೆ. ಸಚಿವನಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದಕ್ಕೆ ಅವಾರ್ಡ್ ಸಹ ಬಂದಿದೆ. ಹಾಗಾಗಿ ಯಾವ ಖಾತೆ ಕೊಟ್ಟರು ಸ್ವೀಕರಿಸುತ್ತೇನೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.