ETV Bharat / state

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಸಾವು

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಮೃತಪಟ್ಟಿದ್ದಾನೆ. ಜಗದೀಶ್ ಎಂಬಾತ ಮೃತ ಕೈದಿ. ಈತ ಕಳೆದ 2 ವರ್ಷಗಳಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ ಎಂದು ತಿಳಿದುಬಂದಿದೆ.

Shimoga central jail Prisoner Death news
ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಸಾವು
author img

By

Published : Mar 9, 2021, 3:06 PM IST

ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿವೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

ಓದಿ: ಮೈಸೂರಿನ ಪಾರ್ಕ್​ನಲ್ಲಿ ಮಗುವಿಗೆ ಜನ್ಮ ನೀಡಿದ ಕೊಡಗು ಮಹಿಳೆ

ಶಿವಮೊಗ್ಗ ತಾಲೂಕು ಸೋಗಾನೆಯಲ್ಲಿರುವ ಕಾರಾಗೃಹದಲ್ಲಿ ಬಂಧಿಯಾಗಿದ್ದ ಜಗದೀಶ್ (51) ಮೃತ ವ್ಯಕ್ತಿ. ಜಗದೀಶ್ ಮಂಗಳೂರು ನ್ಯಾಯಾಲಯದಿಂದ 7 ವರ್ಷ ಶಿಕ್ಷೆಗೆ ಗುರಿಯಾಗಿದ್ದನು. ಕಳೆದ 2 ವರ್ಷಗಳಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಜಗದೀಶ್ ಇಂದು ಬೆಳಗ್ಗೆ ಹಠಾತ್ ಕುಸಿದು ಬಿದ್ದಿದ್ದಾನೆ. ತಕ್ಷಣ ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಅಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.