ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ 37 ಹೊಸ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 372ಕ್ಕೆ ಏರಿಕೆಯಾಗಿದೆ.
ನಿನ್ನೆ ಯಾರೂ ಆಸ್ಪತ್ರೆಯಿಂದ ಬಿಡುಗಡೆಯಾಗಿಲ್ಲ. ಇದುವರೆಗೂ 141 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಹಾಗೂ ಗಾಜನೂರಿನ ಮೂರಾರ್ಜಿ ವಸತಿ ಶಾಲೆಯಲ್ಲಿ 227 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 69 ಕಂಟೇನ್ಮೆಂಟ್ ವಲಯಗಳಿವೆ. ನಿನ್ನೆ ಪತ್ತೆಯಾದ ಹೊಸ ಕೊರೊನಾ ಪ್ರಕರಣಗಳ ಪೈಕಿ ಶಿವಮೊಗ್ಗ-16, ಭದ್ರಾವತಿ-04, ಸಾಗರ-06, ಶಿಕಾರಿಪುರ-03, ಹೊಸನಗರ-03, ತೀರ್ಥಹಳ್ಳಿ-01 ಹಾಗೂ ಸೊರಬದ -03 ಜನ ಸೋಂಕಿತರಿದ್ದಾರೆ. ನಿನ್ನೆ 502 ಜನ ಸ್ವ್ಯಾಬ್ ಮಾದರಿ ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ. ಇದುವರೆಗೆ 19,783 ಜನರ ಸ್ವಾಬ್ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 18,256 ಜನರ ಫಲಿತಾಂಶ ಬಂದಿದೆ, 1,151 ಜನರ ವರದಿ ಬರುವುದು ಬಾಕಿಯಿದೆ. ಒಟ್ಟು 201 ಜನ ವಿವಿಧ ಭಾಗಗಳಿಂದ ಜಿಲ್ಲೆಗೆ ಆಗಮಿಸಿದ್ದಾರೆ. ಸದ್ಯ 323 ಜನರ ಮೇಲೆ ನಿಗಾ ವಹಿಸಲಾಗಿದೆ.