ETV Bharat / state

ಶಿವಮೊಗ್ಗ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ನಿಷೇಧಾಜ್ಞೆ ಸಡಿಲಿಕೆ ಮಾಡಲು ಮನವಿ - ಶಿವಮೊಗ್ಗ ಜಿಲ್ಲಾಧಿಕಾರಿ ಜೊತೆ ಉದ್ಯಮಿಗಳ ಸಭೆ

ನಿಷೇಧಾಜ್ಞೆ ಸಡಿಲಿಸಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಡುವಂತೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.

Shimoga DC Meeting With Chamber of Commerce
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ
author img

By

Published : Dec 9, 2020, 10:52 PM IST

ಶಿವಮೊಗ್ಗ: ನಿಷೇಧಾಜ್ಞೆ ಸಡಿಲಿಸಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವಂತೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ 28ಕ್ಕೂ ಹೆಚ್ಚು ವ್ಯಾಪಾರಸ್ಥರ ಸಂಘಟನೆಗಳು ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ.

ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದ ನಂತರ ನಗರದಲ್ಲಿ ನಡೆದ ಗಲಭೆಯಿಂದಾಗಿ ಡಿಸೆಂಬರ್ 12ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಇದರಿಂದ ಪ್ರತಿನಿತ್ಯದ ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದ್ದು, ವ್ಯಾಪಾರಸ್ಥರು ಹಾಗೂ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಗಳು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಸಡಿಲಿಸಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಬೇಕು ಎಂದು ಕೋರಿದ್ದಾರೆ.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ನಿಷೇಧಾಜ್ಞೆ ಸಡಿಲಿಕೆಗೆ ಮನವಿ

ಇದನ್ನೂ ಓದಿ: ಶಿವಮೊಗ್ಗದಲ್ಲಿ ಡಿ. 12ರವರೆಗೆ ನಿಷೇಧಾಜ್ಞೆ ವಿಸ್ತರಣೆ

ಈ ಬಗ್ಗೆ ಮಾತನಾಡಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಗಾಂಧಿನಗರದಲ್ಲಿ ಇರುವ ವ್ಯಾಪಾರಸ್ಥರು ತಮ್ಮ ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿಕೊಳ್ಳಿ. ನಿಮ್ಮ ರಕ್ಷಣೆಗೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಾಯ ಆಗುತ್ತದೆ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.