ETV Bharat / state

ನೆರೆ ಬಂದ್ರೆ ಎದುರಿಸಲು ಜಿಲ್ಲಾಡಳಿತ ಸರ್ವ ರೀತಿಯಿಂದಲೂ ಸನ್ನದ್ಧ- ಡಿಸಿ ಕೆ ಬಿ ಶಿವಕುಮಾರ್

ಅತಿವೃಷ್ಟಿ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ನಿದಿಗೆ ಕೆರೆಯಲ್ಲಿ ಆಯೋಜಿಸಿದ ತರಬೇತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಚಾಲನೆ ನೀಡಿದರು.

Shimoga
ಕೆ.ಬಿ.ಶಿವಕುಮಾರ್
author img

By

Published : Jun 2, 2020, 3:08 PM IST

ಶಿವಮೊಗ್ಗ : ಮುಂಗಾರಿನ ಅವಧಿಯಲ್ಲಿ ಉಂಟಾಗುವ ಎಲ್ಲಾ ಸಂಭಾವ್ಯ ಅಪಾಯಗಳನ್ನು ಎದುರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಅವಶ್ಯಕ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಕಳೆದ ಮುಂಗಾರು ಅವಧಿಯಲ್ಲಿ ಉಂಟಾಗಿರುವ ಅತಿವೃಷ್ಟಿ ಹಿನ್ನೆಲೆಯಲ್ಲಿ ಈ ಬಾರಿ ಮೊದಲೇ ಎಲ್ಲಾ ಸಿದ್ಧತೆಗಳನ್ನು ನಡೆಸಬೇಕು. ಜಿಲ್ಲಾಡಳಿತದ ಬಳಿ ಲಭ್ಯವಿರುವ ಬೋಟು, ರಕ್ಷಣಾ ಕವಚ ಸೇರಿ ಎಲ್ಲಾ ಸಾಧನ, ಸಲಕರಣೆಗಳನ್ನು ಪರಿಶೀಲಿಸಬೇಕು ಎಂದರು.

ಅತಿವೃಷ್ಟಿಯಿಂದ ಹಾನಿಗೀಡಾಗಬಹುದಾದ ಗ್ರಾಮಗಳನ್ನು ಈಗಲೇ ಗುರುತಿಸಬೇಕು. ತಾಲೂಕಿನಲ್ಲಿ ಲಭ್ಯವಿರುವ ರಕ್ಷಣಾ ಸಾಮಾಗ್ರಿ, ಸಲಕರಣೆಗಳ ಪಟ್ಟಿ ಸಿದ್ಧಪಡಿಸಿ, ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಮಳೆಗೆ ಸುಲಭವಾಗಿ ಕುಸಿಯಬಹುದಾದ ಮನೆ, ಕಟ್ಟಡಗಳನ್ನು ಗುರುತಿಸಿ ತೆರವು ಅಥವಾ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದರು.

ಜಿಲ್ಲಾಡಳಿತದ ವತಿಯಿಂದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ 6 ಬೋಟುಗಳು, 25 ರಕ್ಷಣಾ ಕವಚಗಳು, ಮುರಿದು ಬೀಳುವ ಮರಗಳನ್ನು ತೆರವುಗೊಳಿಸಲು 50 ಟ್ರೀ ಕಟ್ಟರ್‌ಗಳನ್ನು ನೀಡಲಾಗಿದೆ. ಇದರೊಂದಿಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಲು ಹಲವಾರು ಸಾಹಸಿ ಸಂಘ- ಸಂಸ್ಥೆಗಳು ಮುಂದೆ ಬಂದಿವೆ. ಎಲ್ಲರ ಸಹಕಾರ ಪಡೆಯಬೇಕು. ಇದಕ್ಕಾಗಿ ಅಂತಹ ಸಂಘ-ಸಂಸ್ಥೆಗಳ ವಿವರ, ಅವರಲ್ಲಿ ಲಭ್ಯವಿರುವ ರಕ್ಷಣಾ ಸಲಕರಣೆಗಳ ವಿವರಗಳನ್ನು ಪಟ್ಟಿ ಮಾಡಬೇಕು ಎಂದು ತಿಳಿಸಿದರು.

ನೆರೆಯಿಂದ ನೀರು ಸುಲಭವಾಗಿ ನುಗ್ಗಬಹುದಾದ ತಗ್ಗು ಪ್ರದೇಶದಲ್ಲಿರುವ ಜನರಿಗೆ ಈಗಾಗಲೇ ಸೂಚನೆಗಳನ್ನು ನೀಡಬೇಕು. ಒಂದು ವೇಳೆ ಜನರನ್ನು ತುರ್ತಾಗಿ ಸ್ಥಳಾಂತರಿಸುವ ಸಂದರ್ಭ ಬಂದರೆ ಅವರಿಗೆ ತಾತ್ಕಾಲಿಕ ಪುನರ್ವಸತಿಗಾಗಿ ಎಲ್ಲಾ ತಾಲೂಕುಗಳಲ್ಲಿ ಈಗಲೇ ಜಾಗ ಗುರುತಿಸಿ ಅಂದಾಜು ಪಟ್ಟಿ ಸಿದ್ಧಪಡಿಸಬೇಕು. ಗಾಳಿ-ಮಳೆಗೆ ಉರುಳಿ ಬೀಳುವ ವಿದ್ಯುತ್ ಕಂಬಗಳನ್ನು ತಕ್ಷಣ ದುರಸ್ತಿ ಮಾಡಲು ಸಿದ್ದತೆ ಮಾಡಿ ಅಗತ್ಯ ಪ್ರಮಾಣದ ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್​​ಗಳು, ತಂತಿಗಳು ಲಭ್ಯವಿರುವಂತೆ ನೋಡಿಕೊಳ್ಳಿ. ಮಳೆಯಿಂದ ಸಾವು-ನೋವುಗಳು ಸಂಭವಿಸದಂತೆ ಗರಿಷ್ಠ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದರು.

ಜಿಲ್ಲಾಧಿಕಾರಿ ಚಾಲನೆ : ಅತಿವೃಷ್ಟಿ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ನಿದಿಗೆ ಕೆರೆಯಲ್ಲಿ ಆಯೋಜಿಸಿದ ತರಬೇತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠ ಕೆ ಎಂ ಶಾಂತರಾಜು ಹಾಗೂ ಮತ್ತಿತರರು ಈ ಸಂದರ್ಭದಲ್ಲಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.