ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಜ.02 ಮತ್ತು 03 ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೋವಿಂದ ಎಂ. ಕಾರಜೋಳ ಅವರು ಜ.02 ರಂದು ಮಧ್ಯಾಹ್ನ 12.00ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಮ. 01.15ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ನಂತರ ರಾತ್ರಿ 8.00ಕ್ಕೆ ಶಿವಮೊಗ್ಗ- ಸಾಗರ ರಸ್ತೆಯಲ್ಲಿರುವ ಹೋಟೆಲ್ ಹರ್ಷ ದಿ ಫರ್ನ್ನಲ್ಲಿ ಏರ್ಪಡಿಸಲಾಗಿರುವ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಹಾಗೂ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಓದಿ:'ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿರುವ ಓರ್ವರಿಗೆ ವಾರ್ನಿಂಗ್ ನೀಡಲಾಗಿದೆ'
ಜ. 03 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗದ ಸಾಗರ ರಸ್ತೆಯ ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿರುವ ಬಿಜೆಪಿಯ ರಾಜ್ಯ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.