ಶಿವಮೊಗ್ಗ: ಇಲ್ಲಿನ ತುಂಗಾ ನದಿಯಲ್ಲಿ ಕೋಟೆ ಸೀತಾರಾಮಾಂಜನೇಯ ಸ್ವಾಮಿಗೆ ಸೀತಾ ಕಲ್ಯಾಣ ಮಹೋತ್ಸವದ ಅಂಗವಾಗಿ ತೇಪ್ಪೋತ್ಸವ ಕಾರ್ಯಕ್ರಮವನ್ನು ವೈಭವದಿಂದ ನಡೆಸಲಾಯಿತು.
ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಆವರಣದಿಂದ ದೇವರ ಮೆರವಣಿಗೆ ನಡೆಸಲಾಯಿತು. ಈ ದೊಡ್ಡ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು. ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಕೋರ್ಪಲಯ್ಯ ಛತ್ರದವರೆಗೆ ಮೆರವಣಿಗೆ ಸಾಗಿತು. ಆ ಬಳಿಕ ದೇವರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ತೇಪ್ಪೋತ್ಸವವನ್ನು ನೆರವೇರಿಸಲಾಯಿತು. ಈ ವೇಳೆ ಪಟಾಕಿ ಸಿಡಿಸಲಾಯಿತು.
ಈ ವೇಳೆ ಮಾತನಾಡಿದ ಅರ್ಚಕ ದಿನ್ ದಯಾಳ್, 15 ವರ್ಷಗಳಿಂದ ತೆಪ್ಪೋತ್ಸವ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ತುಂಗಾ ನದಿಯಲ್ಲಿ ದೇವರನ್ನು ತೆಪ್ಪದಲ್ಲಿ ಇರಿಸಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ತೆಪ್ಪೋತ್ಸವ ನಡೆಸಲಾಗುತ್ತದೆ ಎಂದರು.