ಶಿವಮೊಗ್ಗ: ನಗರದಲ್ಲಿ ಇತ್ತೀಚೆಗೆ ವಿವಿಧ ಬಡಾವಣೆಗಳಲ್ಲಿ ನಡೆದ ಮೊಬೈಲ್ ಕಳ್ಳತನ ಪ್ರಕರಣ ಬೆನ್ನು ಹತ್ತಿದ ಶಿವಮೊಗ್ಗ ತುಂಗಾ ನಗರ ಪೊಲೀಸರು ಮೂವರು ಅಪ್ರಾಪ್ತರನ್ನು ಬಂಧಿಸಿ ಅವರಿಂದ ಬರೋಬ್ಬರಿ 23 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
![ಅಕ್ರಮ ಮರಳಿ ಸಾಗಣೆ ಪ್ರಕರಣ](https://etvbharatimages.akamaized.net/etvbharat/prod-images/kn-smg-03-mobile-theefsarreet-script-7204213_02062023200410_0206f_1685716450_697.jpg)
ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಚಂದನವನದ ಬಳಿ ಇತ್ತೀಚೆಗೆ ಬೈಕ್ನಲ್ಲಿ ಬಂದ ಮೂವರು ಕಳ್ಳರು ಮೊಬೈಲ್ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್ ಕಿತ್ತು ಪರಾರಿಯಾಗಿದ್ದರು. ಈ ಪ್ರಕರಣ ಬೆನ್ನಟ್ಟಿದ ತುಂಗಾ ನಗರ ಪೊಲೀಸರು, ಮೂವರು ಅಪ್ರಾಪ್ತರನ್ನು ಬಂಧಿಸಿದ್ದಾರೆ. ಇವರಿಂದ 3.25 ಲಕ್ಷ ಮೌಲ್ಯದ 23 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಅಪ್ರಾಪ್ತ ಬಾಲಕರು ದೊಡ್ಡಪೇಟೆ, ತುಂಗಾ ನಗರ ಹಾಗೂ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಲಾ ಒಂದೊಂದು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.
ಅಕ್ರಮ ಮರಳು ಸಂಗ್ರಹ ಮತ್ತು ಸಾಗಣೆ: 14 ಕಡೆ ದಾಳಿ ನಡೆಸಿ 14 ಮರಳು ಲಾರಿಗಳ ವಶ: ಅಕ್ರಮ ಮರಳು ಸಾಗಣೆ ಮತ್ತು ಸಂಗ್ರಹ ಹಿನ್ನೆಲೆಯಲ್ಲಿ 14 ಕಡೆ ತೀರ್ಥಹಳ್ಳಿ ಉಪ ವಿಭಾಗದ ಪೊಲೀಸರು ದಾಳಿ ನಡೆಸಿ, 14 ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತೀರ್ಥಹಳ್ಳಿ ಉಪ ವಿಭಾಗದಲ್ಲಿ ಹಲವು ಭಾಗಗಳಲ್ಲಿ ಅಕ್ರಮವಾಗಿ ಮರಳು ಸಾಗಣೆ ನಡೆಸುತ್ತಿದ್ದ ಬಗ್ಗೆ ಪೊಲೀಸ್ ಇಲಾಖೆಗೆ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಬಿಸಿ ಮುಟ್ಟಿಸಿದ್ದಾರೆ.
![ಪಬ್ಲಿಕ್ ನ್ಯೂಸೆನ್ಸ್ ನಡೆಸಿದವರಿಗೆ ದಂಡ](https://etvbharatimages.akamaized.net/etvbharat/prod-images/kn-smg-03-mobile-theefsarreet-script-7204213_02062023200410_0206f_1685716450_723.jpg)
ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಳೆ ಅವಾಂತರ: ಮರ, ವಿದ್ಯುತ್ ಕಂಬ ಧರೆಗೆ; ಮನೆ, ಅಂಗನವಾಡಿಗೆ ಹಾನಿ
ತೀರ್ಥಹಳ್ಳಿ ಉಪ ವಿಭಾಗದ ಪೊಲೀಸ್ ಠಾಣೆಗಳಾದ ತೀರ್ಥಹಳ್ಳಿ, ಮಾಳೂರು, ಆಗುಂಬೆ ಹಾಗೂ ಹೊಸನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 4 ಕಡೆ, ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 4, ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕಡೆ ಹಾಗೂ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 4 ಕಡೆ ದಾಳಿ ನಡೆಸಲಾಗಿದೆ. ಈ ವೇಳೆ 14 ಟಿಪ್ಪರ್ಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ವಹಿಸಲಾಗಿದೆ.
ಗಲಾಟೆ ಮಾಡಿದವರಿಗೆ ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಪಬ್ಲಿಕ್ ನ್ಯೂಸೆನ್ಸ್ ನಡೆಸಿದ 22 ಜನರ ವಿರುದ್ದ ವಿನೋಬನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದ ವಿನೋಬನಗರ ಗಾಡಿಕೊಪ್ಪ ಹಾಗೂ ಆಲ್ಕೊಳ ಭಾಗದಲ್ಲಿ ವಿನೋಬನಗರ ಪೊಲೀಸರು ದಾಳಿ ನಡೆಸಿ, 22 ಜನರನ್ನು ಠಾಣೆಗೆ ಕರೆಯಿಸಿ ದಂಡ ವಿಧಿಸಿ ಕಳುಹಿಸಿ ಕೊಟ್ಟಿದ್ದಾರೆ.
ಇದನ್ನೂ ಓದಿ: ಮಂಗಳೂರು ಏರ್ಪೋರ್ಟ್ಗೆ ಬಾಂಬ್ ಬೆದರಿಕೆ ಹಾಕಿದ್ದ ಆದಿತ್ಯ ರಾವ್ ವಿರುದ್ಧ ಮತ್ತೊಂದು ಕೇಸ್
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಆರೋಪಿ ವಿರುದ್ಧ ಮತ್ತೊಂದು ದೂರು: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಆದಿತ್ಯ ರಾವ್ ಮೇಲೆ ಶಿವಮೊಗ್ಗದ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಕೇಸ್ ದಾಖಲಾಗಿದೆ. ಶಿವಮೊಗ್ಗ ಜೈಲಿನಲ್ಲಿ ವಿಸಿ ರೂಂಗೆ ನುಗ್ಗಿ ಟಿವಿ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.