ಶಿವಮೊಗ್ಗ: ಲಾಕ್ಡೌನ್ನಿಂದಾಗಿ ಮುಂದೂಡಲ್ಪಟ್ಟಿದ್ದ ಪಿಯುಸಿ ಇಂಗ್ಲಿಷ್ ಪರೀಕ್ಷೆಯು ಇಂದು ರಾಜ್ಯಾದ್ಯಂತ ನಡೆಯುತ್ತಿದ್ದು ಅದರಂತೆ ಜಿಲ್ಲೆಯ 33 ಪರೀಕ್ಷಾ ಕೇಂದ್ರಗಳಲ್ಲಿ 18,799 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಮಾಡಿ ಪರೀಕ್ಷಾ ಕೇಂದ್ರಗಳಲ್ಲಿ ಬಿಡಲಾಯಿತು.

ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನೀಷೆದಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇನ್ನು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗಾಗಿ 129 ರೂಟ್ಗಳಲ್ಲಿ 133 ಬಸ್ ವ್ಯವಸ್ಥೆ ಮಾಡಲಾಗಿತ್ತು , ಯಾವುದೇ ವಿದ್ಯಾರ್ಥಿಗೂ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ.