ETV Bharat / state

ನನಸಾದ ಶಂಕರ್​ನಾಗ್ ಕನಸು: ವೀಕ್ಷಣೆಗೆ ತೆರೆದುಕೊಂಡ 'ಮ್ಯೂಸಿಯಂ ಮಾಲ್ಗುಡಿ' - ರೈಲ್ವೇ ರಾಜ್ಯ ಸಚಿವ ಸುರೇಶ್ ಅಂಗಡಿ

ಆರ್.ಕೆ.ನಾರಾಯಣ್ ಅವರ ಪ್ರಸಿದ್ಧ ಕಾದಂಬರಿ ಆಧಾರಿತ ‘ಮಾಲ್ಗುಡಿ ಡೇಸ್‌’ ಧಾರಾವಾಹಿಯನ್ನು ಶಂಕರ್‌ನಾಗ್ ಅವರು ದೂರದರ್ಶನಕ್ಕಾಗಿ 1986- 89ರ ಅವಧಿಯಲ್ಲಿ ನಿರ್ದೇಶಿಸಿದ್ದರು. ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಮೂಡಿಬಂದ ಈ ಧಾರಾವಾಹಿ ವಿಶ್ವದ ಗಮನ ಸೆಳೆದಿತ್ತು. ‘ಮ್ಯೂಸಿಯಂ ಮಾಲ್ಗುಡಿ’ ಅನ್ನು ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಆನ್‌ಲೈನ್ ಮೂಲಕ ಚಾಲನೆ ನೀಡಿದರು.

Malgudi museum
ಮ್ಯೂಸಿಯಂ ಮಾಲ್ಗುಡಿ
author img

By

Published : Aug 8, 2020, 8:03 PM IST

Updated : Aug 9, 2020, 12:09 AM IST

ಶಿವಮೊಗ್ಗ: ದಿ. ಶಂಕರ್​​ನಾಗ್ ಅವರ ಕಾಲ್ಪನಿಕ ಕನಸು ಈಡೇರಿದೆ. ಮಲೆನಾಡಿನ ಸೊಗಡಿನ ‘ಮಾಲ್ಗುಡಿ ಡೇಸ್’ ಧಾರಾವಾಹಿಯನ್ನು ಚಿತ್ರೀಕರಣ ಮಾಡಿದ್ದ ಹೊಸನಗರ ತಾಲೂಕು ಅರಸಾಳುವಿನ ನವೀಕರಣಗೊಂಡ ರೈಲುನಿಲ್ದಾಣ ಮತ್ತು ‘ಮ್ಯೂಸಿಯಂ ಮಾಲ್ಗುಡಿ’ ಅನ್ನು ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಆನ್‌ಲೈನ್ ಮೂಲಕ ಚಾಲನೆ ನೀಡಿದರು.

ಆರ್.ಕೆ.ನಾರಾಯಣ್ ಅವರ ಪ್ರಸಿದ್ಧ ಕಾದಂಬರಿ ಆಧಾರಿತ ‘ಮಾಲ್ಗುಡಿ ಡೇಸ್‌’ ಧಾರಾವಾಹಿಯನ್ನು ಶಂಕರ್‌ನಾಗ್ ಅವರು ದೂರದರ್ಶನಕ್ಕಾಗಿ 1986- 89ರ ಅವಧಿಯಲ್ಲಿ ನಿರ್ದೇಶಿಸಿದ್ದರು. ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಮೂಡಿಬಂದ ಈ ಧಾರಾವಾಹಿ ವಿಶ್ವದ ಗಮನ ಸೆಳೆದಿತ್ತು.

ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ಲಿಫ್ಟ್ ಹಾಗೂ ಅರಸಾಳು ನಿಲ್ದಾಣದಲ್ಲಿ ಮೂಲಸೌಕರ್ಯಗಳು, ಸ್ಟೇಷನ್ ಬಿಲ್ಡಿಂಗ್ (ಮ್ಯೂಸಿಯಂ ಬಿಲ್ಡಿಂಗ್) ಹಾಗೂ ವಿಸ್ತರಣೆಗೊಂಡ ರೈಲ್ವೆ ಫ್ಲಾಟ್ ಫಾರ್ಮ್ ಕಾಮಗಾರಿಗಳನ್ನು ಆನ್​​ಲೈನ್​ ಮೂಲಕ ಉದ್ಘಾಟಿಸಿ ಮಾತನಾಡಿದ ಸಚಿವರು, ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೇ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಮುಗಿದ ತಕ್ಷಣ ಯೋಜನೆ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು.

994 ಕೋಟಿ ರೂ ವೆಚ್ಚದಲ್ಲಿ ಶಿವಮೊಗ್ಗ-ರಾಣೇಬೆನ್ನೂರ ಹೊಸ ರೈಲು ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳು ಉಚಿತವಾಗಿ ಭೂಮಿ ಒದಗಿಸುವುದರ ಜತೆಗೆ, ರಾಜ್ಯ ಸರ್ಕಾರದ ವತಿಯಿಂದ ಶೇ.50 ರಷ್ಟು ಯೋಜನಾ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದಾರೆ ಎಂದರು.

ವರ್ಚುವಲ್ ವಿಡಿಯೋ ಸಮಾರಂಭ

ಅದೇ ರೀತಿ ದಾವಣಗೆರೆ-ಬೆಂಗಳೂರು ನಡುವೆ ಡಬಲ್ ಲೈನ್ ನಿರ್ಮಾಣಕ್ಕೂ ಜಮೀನು ಒದಗಿಸುವುದಾಗಿ ತಿಳಿಸಿದ್ದಾರೆ. ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದ ತಕ್ಷಣವೇ ಕಾಮಗಾರಿ ಆರಂಭಿಸಲು ಅಗತ್ಯ ಕ್ರಮವನ್ನು, ಇಲಾಖೆಯ ವತಿಯಿಂದ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಿವಮೊಗ್ಗ ಪೆಸಿಟ್ ಕಾಲೇಜು ಸಭಾಂಗಣದಲ್ಲಿ ಸಜ್ಜುಗೊಳಿಸಲಾಗಿದ್ದ ವರ್ಚುವಲ್ ವಿಡಿಯೋ ಮೂಲಕ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಮಾತನಾಡಿ, ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಎರಡು ಲಿಫ್ಟ್​ಗಳನ್ನು ನಿರ್ಮಿಸಲಾಗಿದ್ದು, ಹಿರಿಯ ನಾಗರಿಕರಿಗೆ ಹಾಗೂ ಅಶಕ್ತ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದರು.

ಇದೇ ರೀತಿ ಆರ್.ಕೆ. ನಾರಾಯಣ್ ಅವರ ಖ್ಯಾತ `ಮಾಲ್ಗುಡಿ ಡೇಸ್’ ಕೃತಿಯನ್ನು ಟೆಲಿವಿಷನ್ ಸೀರಿಯಲ್ ಆಗಿ ನಿರ್ಮಿಸಿದ ದಿ. ಶಂಕರನಾಗ್ ಅವರು ಇದೇ ರೈಲ್ವೇ ನಿಲ್ದಾಣವನ್ನು ಪ್ರಮುಖವಾಗಿ ಬಳಸಿಕೊಂಡಿದ್ದರು. ಇದರ ನೆನಪಿಗಾಗಿ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಹಳೆಯ ಸ್ಟೇಷನ್​​ನನ್ನು ಮಾಲ್ಗುಡಿ ಮ್ಯೂಸಿಯಂ ಆಗಿ ಪರಿವರ್ತಿಸಲಾಗಿದೆ' ಎಂದರು.

ಇಲ್ಲಿನ ಫ್ಲಾಟ್‍ಫಾರ್ಮ್ ವಿಸ್ತರಿಸಲಾಗಿದ್ದು, ಪ್ರಸ್ತುತ 12ಕೋಚ್ ರೈಲುಗಳಿಗೆ ನಿಲುಗಡೆಗೆ ಅವಕಾಶವಿತ್ತು. ಇದೀಗ 28ಕೋಚ್ ರೈಲುಗಳು ನಿಲ್ಲುವ ಸೌಲಭ್ಯ ಕಲ್ಪಿಸಲಾಗಿದೆ. ಇದೊಂದು ಪ್ರವಾಸಿ ತಾಣವಾಗಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು.

ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆಗೆ ₹ 245 ಕೋಟಿ ವೆಚ್ಚವಾಗಲಿದ್ದು, ಇನ್ನೆರಡು ತಿಂಗಳಲ್ಲಿ ಭೂಸ್ವಾಧೀನ ಪೂರ್ಣಗೊಳ್ಳಲಿದೆ. ಇದೇ ರೀತಿ ಶಿವಮೊಗ್ಗ-ಹರಿಹರ ರೈಲು ಮಾರ್ಗ, ಬಿರೂರು-ಶಿವಮೊಗ್ಗ ಡಬ್ಲಿಂಗ್ ಕಾರ್ಯ, ತಾಳಗುಪ್ಪ- ಸಿದ್ದಾಪುರ ಹಾಗೂ ಶಿವಮೊಗ್ಗದಿಂದ ಶೃಂಗೇರಿ ಮಾರ್ಗವಾಗಿ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬೇಕಾಗಿದೆ. ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗದ ನೂರು ಅಡಿ ವರ್ತುಲ ರಸ್ತೆ, 2 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

ನಾಲ್ಕು ರೈಲ್ವೇ ಮೇಲು ಸೇತುವೆ ನಿರ್ಮಾಣ:

ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ, ಭದ್ರಾವತಿಯ ಜೆಡಿ ಕಟ್ಟೆಯಲ್ಲಿ, ಕಾಶಿಪುರ ಮತ್ತು ಸವಳಂಗ ರಸ್ತೆಯಲ್ಲಿ ರೈಲ್ವೇ ಮೇಲು ಸೇತುವೆ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ದೊರೆತಿದ್ದು, ಕಾಮಗಾರಿ ಆದಷ್ಟು ಬೇಗನೆ ಆರಂಭವಾಗಲಿದೆ ಎಂದು ಅವರು ಹೇಳಿದರು.

ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ವರ್ಚುವಲ್ ವೇದಿಕೆಯ ಮೂಲಕ ಸಮಾರಂಭದಲ್ಲಿ ಭಾಗವಹಿಸಿದ್ದರು.

Last Updated : Aug 9, 2020, 12:09 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.