ಶಿವಮೊಗ್ಗ: ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಅವರು ಮಾಹಿತಿ ನೀಡಿದರು.
ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದೊಂದು ತಿಂಗಳಿಂದ ಶಿವಮೊಗ್ಗ ಹಾಗೂ ಭದ್ರಾವತಿ ನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. 6 ಮೊಬೈಲ್ ಕಳ್ಳತನ, 2 ಸರಗಳ್ಳತನ ಮತ್ತು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ತುಂಗಾ ಪೊಲೀಸ್ ಠಾಣೆಯಲ್ಲಿ 1 ಹಾಗೂ ಮಳೂರಿನಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕೇಸ್ಗಳನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ ತನಿಖೆ ಕೈಗೊಂಡಿದೆ. ಈ ಪ್ರಕರಣಗಳ ಹಿಂದೆ ಗಾಂಜಾ ಸೇವನೆ ಇದೆಯಾ ಎಂಬುದನ್ನು ಸಹ ತನಿಖೆ ಮಾಡಲಾಗುತ್ತಿದೆ ಎಂದರು.
ಸರ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಭದ್ರಾವತಿ ಕಡೆಯಿಂದ ಹಾಗೂ ಬೈಕ್ ಕಳ್ಳತನನ್ನು ಕಡೂರು ಕಡೆಯಿಂದ ಬಂದು ಕಳ್ಳತನ ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ. ಅವುಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತನಿಖೆ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.
ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ತಂಡವನ್ನು ಬಂಧಿಸಿ ಅವರಿಂದ ಹನ್ನೊಂದು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟು 33 ಬೈಕ್ಗಳನ್ನು ಪತ್ತೆ ಹಚ್ಚಲಾಗಿದೆ. ಈ ಪ್ರಕರಣಗಳನ್ನು ಬೇಧಿಸಲು ಶಿವಮೊಗ್ಗ ಸಿಟಿ ಡಿವೈಎಸ್ಪಿ ಹಾಗೂ ಕುಂಸಿ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಪ್ರತಿ ಠಾಣೆಯ ಕ್ರೈಮ್ ಇಬ್ಬರು ಸಿಬ್ಬಂದಿಯನ್ನು ತೆಗೆದುಕೊಂಡು ಟೀಂ ರೆಡಿ ಮಾಡಲಾಗಿದೆ ಎಂದರು.