ಶಿವಮೊಗ್ಗ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ಬೇಗ ಗುಣಮುಖರಾಗಲೆಂದು ಯುವ ಕಾಂಗ್ರೆಸ್ ವತಿಯಿಂದ ನಗರದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.
ದೆಹಲಿ ಗಂಗಾರಾಂ ಆಸ್ಪತ್ರೆಗೆ ಅನಾರೋಗ್ಯದ ಹಿನ್ನೆಲೆ ಸೋನಿಯಾ ಗಾಂಧಿಯವರು ದಾಖಲಾಗಿದ್ದಾರೆ. ಹಾಗಾಗಿ ಅವರು ಬೇಗ ಗುಣಮುಖರಾಗಿ ಬರಬೇಕು ಎಂದು ಸೋನಿಯಾ ಗಾಂಧಿಯವರ ಹೆಸರಿನಲ್ಲಿ ಅರ್ಚನೆ, ರುದ್ರಾಭಿಷೇಕ ಹಾಗೂ ಸಾವಿರ ಗರಿಕೆ ಅರ್ಪಿಸಿ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಗರಾಧ್ಯಕ್ಷ ಹೆಚ್ ಪಿ ಗಿರೀಶ್, ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ ಹಾಗೂ ಯುವ ಕಾಂಗ್ರೆಸ್ ಉಪಾಧ್ಯಕ್ಷ ಡಿ ಆರ್ ಗಿರೀಶ್ ಉಪಸ್ಥಿತರಿದ್ದರು.