ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ: ಬ್ಯಾಂಕ್ ಬಂದ್ ಮಾಡಿ ನೌಕರರ ಪ್ರತಿಭಟನೆ - ಬ್ಯಾಂಕ್ ಬಂದ್ ಮಾಡಿ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್ ನೌಕರರು ಹಾಗೂ ಸಿಬ್ಬಂದಿಗಳು ಶಿವಮೊಗ್ಗದಲ್ಲಿ ಬ್ಯಾಂಕ್ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ನೌಕರರ ಪ್ರತಿಭಟನೆ
ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ, ನಗರದ ಬಿ.ಹೆಚ್. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ ಮುಂದೆ ಬ್ಯಾಂಕ್ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರದಿಂದ ಬ್ಯಾಂಕುಗಳಿಗೆ ಯಾವುದೇ ಮನ್ನಣೆ ಸಿಕ್ಕಿಲ್ಲ. ಸಿಬ್ಬಂದಿಗಳ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳು ಇನ್ನೂ ಈಡೇರಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಂಕ್ ನೌಕರರ ಪ್ರತಿಭಟನೆ ಇಂದು ಮತ್ತು ನಾಳೆ ನಡೆಯಲಿದೆ. ಈ ಮುಷ್ಕರದಿಂದಾಗಿ ಗ್ರಾಹಕರು ಪರದಾಡುವಂತಾಗಿದೆ.