ಶಿವಮೊಗ್ಗ: ಹುಣಸೋಡು ಕಲ್ಲು ಕ್ವಾರಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಫೋಟೋ ಒಂದು ವೈರಲ್ ಆಗಿದೆ.
ಜನ್ಮದಿನ ಆಚರಿಸಿಕೊಂಡಿರುವ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಅಧಿಕಾರಿಗಳಿಗೂ ಆರೋಪಿಗೂ ಸಂಬಂಧ ಇದೆಯಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ.
ಇದನ್ನು ಓದಿ: ದೆಹಲಿ ಹಿಂಸಾಚಾರ: ರೈತರು ಗಡಿಗೆ ಮರಳುವಂತೆ ಅಮರಿಂದರ್ ಸಿಂಗ್ ಒತ್ತಾಯ
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯಲ್ಲಿ ಕೆಲ ದಿನಗಳ ಹಿಂದೆ ಹುಟ್ಟುಹಬ್ಬ ಆಚರಿಸಿರುವ ಫೋಟೋದಲ್ಲಿ ಆರೋಪಿ ನರಸಿಂಹ ಕೂಡಾ ಇದ್ದಾನೆ. ಅಧಿಕಾರಿಗಳಿಗೆ ಸನ್ಮಾನ ಮಾಡಿರುವ ಫೋಟೋ ಕೂಡ ವೈರಲ್ ಆಗಿದೆ. ಈ ಎಲ್ಲ ಫೋಟೋಗಳು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.