ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರಧಾನಿ ಮೋದಿ ಅಧಿಕಾರಕ್ಕೆ ಬರುವ ಮುಂಚೆ ದೇಶದ ಜನರಿಗೆ ಅಚ್ಛೇ ದಿನ್ ತರುತ್ತೇವೆ, ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಅಧಿಕಾರಕ್ಕೆ ಬಂದ ಬಳಿಕ ದೇಶದ ಜನರ ಜೀವನದ ಜೊತೆ ಆಟ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಓದಿ : ಗಾಂಜಾ ಮಾರಾಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದ ಶಿವಮೊಗ್ಗ ಎಸ್ಪಿ
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ನೆಮ್ಮದಿಯ ಜೀವನ ನಡೆಸುವುದು ಕಷ್ಟವಾಗಿದೆ. ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು.