ETV Bharat / state

ಉತ್ತಮ ಕಾರ್ಯ ಸಾಧನೆ: ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಶಿವಮೊಗ್ಗ ಜಿಪಂ

ಏಪ್ರಿಲ್ 9ರಂದು ಹುಬ್ಬಳ್ಳಿಯಲ್ಲಿ ನಡೆಯುವ ರಾಜ್ಯಮಟ್ಟದ ಜಲಶಕ್ತಿ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವೈಶಾಲಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimogga jilla panchayat
Shimogga jilla panchayat
author img

By

Published : Apr 8, 2021, 6:33 PM IST

ಶಿವಮೊಗ್ಗ: ಜಿಲ್ಲೆಯಲ್ಲಿ 2020-21ನೇ ಸಾಲಿನ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದಕ್ಕಾಗಿ ಅಧಿಕಾರಿ, ಸಿಬ್ಬಂದಿ, ಕಾಯಕ ಬಂಧುು, ಇತರೆ ವ್ಯಕ್ತಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸೊರಬ ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ದಿನೇಶ್ ಡಿ.ಇ., ಹೊಸನಗರ ತಾಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕ ನಾಗಭೂಷಣ್ ಎಂ.ಬಿ., ಸಾಗರ ತಾಲೂಕು ಪಂಚಾಯತಿ ಐ.ಇ.ಸಿ ಸಂಯೋಜಕ ನಿತ್ಯಾನಂದ ಕೆ., ಶಿವಮೊಗ್ಗ ತಾಲೂಕು ಮಂಢಘಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಎಂ., ಶಿಕಾರಿಪುರ ತಾಲೂಕಿನ ಅಮಟೇಕೊಪ್ಪ ಗ್ರಾಮ ಪಂಚಾಯತ್ ಗಣಕಯಂತ್ರ ನಿರ್ವಾಹಕ ಶಿವನಗೌಡ, ಶಿಕಾರಿಪುರ ತಾಲೂಕಿನ ಬಿ.ಎಫ್.ಟಿ ಲೋಹಿತ್​ಕುಮಾರ್ ಇವರುಗಳು ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಏಪ್ರಿಲ್ 9ರಂದು ಹುಬ್ಬಳ್ಳಿಯಲ್ಲಿ ನಡೆಯುವ ರಾಜ್ಯಮಟ್ಟದ ಜಲಶಕ್ತಿ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅನೇಕ ಕೇಂದ್ರ ಮತ್ತು ರಾಜ್ಯ ಸಚಿವರುಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವೈಶಾಲಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.