ಶಿವಮೊಗ್ಗ: ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಚಾಲಕರಿಗೆ ಧನಸಹಾಯ ಘೋಷಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಆಟೋ ಚಾಲಕರ ಸಂಘ ಅಭಿನಂದನೆ ಸಲ್ಲಿಸಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಕೃಷ್ಣಪ್ಪ, ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ಸಲುವಾಗಿ ಕಳೆದ ಒಂದೂವರೆ ತಿಂಗಳಿಂದ ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ದುಡಿದು ತಿನ್ನುವ ನಾವುಗಳು ಸಂಕಷ್ಟಕ್ಕೆ ಸಿಲುಕಿದ್ದೆವು. ಈ ಸಮಸ್ಯೆಯನ್ನು ಅರಿತ ರಾಜ್ಯ ಸರ್ಕಾರ ನಮ್ಮ ನೆರವಿಗೆ ಧಾವಿಸಿದೆ ಎಂದರು.
ಸಂಕಷ್ಟದ ಸಂದರ್ಭದಲ್ಲಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವುದು ನಮ್ಮೆಲ್ಲರಿಗೆ ಸಂತೋಷ ತಂದಿದೆ. ಹಾಗಾಗಿ ಸರ್ಕಾರದ ಎಲ್ಲಾ ಸಚಿವರಿಗೂ, ಶಾಸಕರಿಗೂ ಧನ್ಯವಾದಗಳು ಎಂದರು.