ETV Bharat / state

ಅಭ್ಯರ್ಥಿ ಗೊತ್ತಿಲ್ಲದೆ ನಾಮಪತ್ರ ಸಲ್ಲಿಸಲು ತಯಾರಿ ನಡೆಸಿದ ಶಿವಮೊಗ್ಗ ನಗರ ಬಿಜೆಪಿ - ಸಂಸದ ರಾಘವೇಂದ್ರ

ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ. ಹೀಗಾಗಿ ಶಿವಮೊಗ್ಗ ನಗರ ಬಿಜೆಪಿ ಘಟಕ ನಾಳೆ ನಾಮಪತ್ರ ಸಲ್ಲಿಕೆಯ ತಯಾರಿ ನಡೆಸಿದೆ.

ಬಿಜೆಪಿ
ಬಿಜೆಪಿ
author img

By

Published : Apr 19, 2023, 10:30 PM IST

ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆ ಇನ್ನಷ್ಟೇ ಆಗಬೇಕಿದೆ. ಆದರೆ ಅಭ್ಯರ್ಥಿ ಯಾರೆಂದು ತಿಳಿಯದೇ ನಾಳೆ ನಾಮಪತ್ರ ಸಲ್ಲಿಸಲು ಶಿವಮೊಗ್ಗ ನಗರ ಬಿಜೆಪಿ ಘಟಕ ಸಿದ್ಧತೆ ನಡೆಸಿದೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಇದರಿಂದ ಶಿವಮೊಗ್ಗ ನಗರ ಬಿಜೆಪಿ ಘಟಕ ನಾಮಪತ್ರ ಸಲ್ಲಿಕೆಯ ತಯಾರಿ ನಡೆಸಿದೆ.

ಬೆಳಗ್ಗೆ ಬಿಜೆಪಿ ಕಾರ್ಯಕರ್ತರಿಗೆ ನಗರದ ಕೋಟೆ ಆಂಜನೇಯ ದೇವಾಲಯದ ಬಳಿ ಜಮಾವಣೆಯಾಗಲು ಕರೆ ನೀಡಲಾಗಿದೆ. ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕಾಗಿ ಎಲ್ಲ ಕಾರ್ಯಕರ್ತರು ಆಗಮಿಸಬೇಕು ಎಂದು ನಗರ ಘಟಕದಿಂದ ಪತ್ರವನ್ನು ನಗರಾಧ್ಯಕ್ಷ ಜಗದೀಶ್ ಮಾಧ್ಯಮದವರಿಗೆ ತಲುಪಿಸಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕೋಟೆ ಸೀತಾರಾಮಾಂಜನೇಯ ದೇವಾಲಯದಿಂದ ಮೆರವಣಿಗೆ ಹೊರಟು ಗಾಂಧಿ ಬಜಾರ್, ಶಿವಪ್ಪ‌ನಾಯಕ ವೃತ್ತ, ನೆಹರು ರಸ್ತೆಯ ಮೂಲಕ ಗೋಪಿ ವೃತ್ತದಿಂದ ಮಹಾನಗರ ಪಾಲಿಕೆಗೆ ತೆರಳಿ‌ ನಾಮಪತ್ರ ಸಲ್ಲಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಯ ನಂತರ ಎನ್ ಡಿ ವಿ ಹಾಸ್ಟಲ್ ಮೈದಾನದಲ್ಲಿ ಸಮಾವೇಶವನ್ನು ನಡೆಸುವುದಾಗಿ ತಿಳಿಸಲಾಗಿದೆ. ಸಮಾವೇಶದಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಸಂಸದ ರಾಘವೇಂದ್ರ ಸೇರಿ ಅನೇಕರು ಭಾಗಿಯಾಗಲಿದ್ದಾರೆ. ಇದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕೆಂದು ವಿನಂತಿಸಿಕೊಳ್ಳಲಾಗಿದೆ.

ಅಚ್ಚರಿ ಅಂದ್ರೆ ಇದುವರೆಗೂ ಅಭ್ಯರ್ಥಿಯನ್ನೇ ಘೋಷಣೆ ಮಾಡದೇ ಇರುವುದರಿಂದ ಯಾರು ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಕುತೂಹಲ ಪಕ್ಷದ ಕಾರ್ಯಕರ್ತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮೂಡಿದೆ. ಅಭ್ಯರ್ಥಿ ಘೋಷಣೆ ಆಗದೇ ಬಿಜೆಪಿ ನಾಮಪತ್ರದ ಮೆರವಣಿಗೆಗೆ ಕರೆದಿರುವುದು ಪಕ್ಷದ ಕಾರ್ಯಕರ್ತರಲ್ಲಿನ ಒಗ್ಗಟ್ಟನ್ನು ಸೂಚಿಸುತ್ತದೆ ಎನ್ನಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್, ಆಮ್ ಆದ್ಮಿ ಪಕ್ಷದವರು ನಾಮಪತ್ರ ಸಲ್ಲಿಸಿದ್ದಾರೆ.

ವಿಜಯೇಂದ್ರರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಕೊಡಿ- ಬಿಎಸ್​ವೈ: ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮಗ ವಿಜಯೇಂದ್ರರನ್ನು ಕನಿಷ್ಟ 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಕೊಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಮತದಾರರಲ್ಲಿ ಇಂದು ಮನವಿ ಮಾಡಿಕೊಂಡಿದ್ದಾರೆ. ಇಂದು ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ ವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಬಿಎಸ್​ವೈ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆ ಬಳಿಕ ನಡೆದ ಬೃಹತ್​ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿಎಸ್​ವೈ, ಭವ್ಯ ಭಾರತದ ಸರ್ವಾಂಗೀಣ ಅಭಿವೃದ್ಧಿಗಾಗಿ ನರೇಂದ್ರ ಮೋದಿ, ಅಮಿತ್​ ಶಾ ಕೆಲಸ‌ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಬಿಜೆಪಿ‌ 130 ಸ್ಥಾನ ಗಳಿಸುವುದು ಅಷ್ಟೇ ಸತ್ಯ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ವಿಜಯೇಂದ್ರರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಕೊಡಿ: ಯಡಿಯೂರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.