ETV Bharat / state

ಸರಳ ದಸರಾ ಆಚರಣೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ನಿರ್ಧಾರ - ದಸರಾ ಆಚರಣೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ನಿರ್ಧಾರ

ಶಿವಮೊಗ್ಗ ನಗರದಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಿ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲು ಪಾಲಿಕೆ ತೀರ್ಮಾನಿಸಿದೆ.

shivamogga city corporation meeting on dasara celebration
ಸರಳ ದಸರಾ ಆಚರಣೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ನಿರ್ಧಾರ
author img

By

Published : Sep 11, 2020, 2:15 PM IST

ಶಿವಮೊಗ್ಗ:ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಿ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲಾಗುವುದು ಎಂದು ಮೇಯರ್ ಸುವರ್ಣಾ ಶಂಕರ್ ತಿಳಿಸಿದರು.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ದಸರಾ ಹಬ್ಬ ಆಯೋಜನೆ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಮೆರವಣಿಗೆ ಇರುವುದಿಲ್ಲ. ಆದರೆ ಎಲ್ಲಾ ದೇವ, ದೇವತೆಗಳನ್ನು ಸೇರಿಸಿ ಬನ್ನಿ ಮುಡಿಯುವ ಕಾರ್ಯ ನಡೆಸಲಾಗುವುದು. ಹಿಂದಿನ ವರ್ಷದಂತೆ ಇಡೀ ನಗರದ ದೀಪಾಲಂಕಾರ ಮಾಡಲಾಗುವುದು. ವಿಜಯ ದಶಮಿಗೆ ಸಂಬಂಧಿಸಿದಂತೆ ಇತರ ಯಾವುದೇ ದಸರಾ ಕಾರ್ಯಕ್ರಮಗಳು ಇರುವುದಿಲ್ಲ ಎಂದರು.

ಆಯುಕ್ತ ಚಿದಾನಂದ ವಟಾರೆ ಅವರು ಮಾತನಾಡಿ, ಈ ಬಾರಿ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧಾರ ಕೈಗೊಂಡಿದೆ. ದಸರಾ ಆಚರಣೆ ಕುರಿತಾಗಿ ಇದುವರೆಗೆ ಸರ್ಕಾರದಿಂದ ಯಾವುದೇ ಮಾರ್ಗಸೂಚಿಗಳು ಬಂದಿರುವುದಿಲ್ಲ. ಆದರೆ ಸರ್ಕಾರದ ಸೂಚನೆ ಪ್ರಕಾರ ಶಿವಮೊಗ್ಗದಲ್ಲಿ ಈ ಬಾರಿ ಸರಳವಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಜನರು ಮನೆಯಲ್ಲಿಯೇ ಉತ್ಸವವನ್ನು ವೀಕ್ಷಿಸಲು ಅನುಕೂಲವಾಗುವಂತೆ ಕಾರ್ಯಕ್ರಮಗಳ ಲೈವ್ ಸ್ಟ್ರೀಮಿಂಗ್ ಸಹ ಮಾಡಬಹುದಾಗಿದೆ ಎಂದು ಹೇಳಿದರು.

ಕಳೆದ ವರ್ಷ ದಸರಾ ಆಚರಣೆಗೆ ಸರ್ಕಾರ ಕನ್ನಡ ಮತ್ತು ಸಂಸ್ಕೃ ತಿ ಇಲಾಖೆ ಮುಖಾಂತರ 1.80ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ 1.63 ಕೋಟಿ ರೂ. ವೆಚ್ಚ ಮಾಡಲಾಗಿದ್ದು, 17 ಲಕ್ಷ ರೂ. ಉಳಿತಾಯವಿದೆ. ಈ ಅನುದಾನ ಹಾಗೂ ಇನ್ನಿತರ ಉಳಿಕೆ ಅನುದಾನ ಬಳಸಿಕೊಂಡು ದಸರಾ ಸಾಂಪ್ರದಾಯಿಕವಾಗಿ ಆಚರಿಸಬಹುದಾಗಿದೆ ಎಂದು ಸಭೆಗೆ ತಿಳಿಸಿದರು.

ಸದಸ್ಯರಿಂದ ವಿವಿಧ ಅಭಿಪ್ರಾಯ: ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್ ಅವರು ಮಾತನಾಡಿ, ಸರ್ಕಾರದ ಮಾರ್ಗಸೂಚಿ ಪ್ರಕಾರ ಅತ್ಯಂತ ಸರಳವಾಗಿ ಹಬ್ಬವನ್ನು ಆಚರಿಸಬೇಕು. ನಮ್ಮ ಆಚರಣೆಗಳು ಕರೋನಾ ಹೆಚ್ಚಾಗಲು ಕಾರಣವಾಗಬಾರದು. ಜನರ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿಜಯ ದಶಮಿಯ ಸಾಂಪ್ರದಾಯಿಕತೆಗೆ ಯಾವುದೇ ಧಕ್ಕೆ ಬಾರದಂತೆ ಅತ್ಯಂತ ಕಡಿಮೆ ಜನರನ್ನು ಸೇರಿಸಿ ಸರಳವಾಗಿ ಕಾರ್ಯಕ್ರಮ ರೂಪಿಸಬೇಕು ಎಂದು ಸದಸ್ಯ ಜ್ಞಾನೇಶ್ವರ್ ತಿಳಿಸಿದರು. ಯಾವುದೇ ಆಡಂಅಬರ, ದ್ದೂರಿತನವಿಲ್ಲದೇ ಸರಳವಾಗಿ ದಸರಾ ಆಚರಿಸಬಹುದಾಗಿದೆ. ದಸರಾ ಆಚರಣೆಗೆ ಮೀಸಲಾಗಿರಿಸಿರುವ ಅನುದಾನದಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಮಹಾನಗರ ಪಾಲಿಕೆ ವತಿಯಿಂದ 2 0ವೆಂಟಿಲೇಟರ್ ಒದಗಿಸುವ ನಿರ್ಣಯ ಕೈಗೊಳ್ಳಬೇಕು ಎಂದು ಸದಸ್ಯ ಎಚ್.ಸಿ.ಯೋಗೀಶ್ ತಿಳಿಸಿದರು.

ಉತ್ಸವದ ಆಶಯಕ್ಕೆ ಧಕ್ಕೆ ಬಾರದಂತೆ ವ್ಯವಸ್ಥಿತವಾಗಿ ದಸರಾ ಆಯೋಜಿಸುವ ಕುರಿತು ಎಲ್ಲರೂ ಸೇರಿ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸದಸ್ಯ ಚನ್ನಬಸಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.