ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದ್ದು, ಇಂದು ಮೂರು ವರ್ಷದ ಮಗು ಸೇರಿ ಆರು ಮಂದಿಯಲ್ಲಿ ಸೋಂಕು ಕಾಣಿಸಿದೆ.
ಬೆಂಗಳೂರು ಹಾಗೂ ಹೊರ ರಾಜ್ಯದಿಂದ ಬಂದವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಇದುವರೆಗೆ 7 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿತರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.