ಶಿವಮೊಗ್ಗ : ನಗರದ ಹೊರವಲಯ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಇಎನ್ ಪೊಲೀಸರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಹೊಳಲೂರು ನಿವಾಸಿ ಸದ್ದಾಂ ಹುಸೇನ್ ಅಲಿಯಾಸ್ ಸಾಂಬಾ (30) ಆರೋಪಿ.
ಬಂಧಿತನಿಂದ 20 ಸಾವಿರ ರೂಪಾಯಿ ಮೌಲ್ಯದ 338 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿ ವಿರುದ್ದ ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕಲಂ20(b) ಎನ್ಡಿಪಿಎಸ್ (ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ವಸ್ತುಗಳು) ಕಾಯ್ದೆಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಡಿಸಿಆರ್ಬಿ ಡಿವೈಎಸ್ಪಿ ಪ್ರಭು ಡಿ.ಟಿ, ಸಿಇಎನ್ ಪಿಐ ದೀಪಕ್ ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದರು.
ಪೂರ್ವ ವಲಯ ಐಜಿಪಿ ಭೇಟಿ: ಪೂರ್ವ ವಲಯದ ಐಜಿಪಿ ತ್ಯಾಗರಾಜ್ ಗುರುವಾರ ದಿಢೀರ್ ಶಿವಮೊಗ್ಗ ನಗರದ ಎರಡು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಕೋಟೆ ಪೊಲೀಸ್ ಠಾಣೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ಪೊಲೀಸ್ ಠಾಣೆಯ ಸಿಬ್ಬಂದಿಗೆ ಉತ್ತಮವಾಗಿ ಕೆಲಸ ನಿರ್ವಹಿಸುವಂತೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಎಸ್ಪಿ ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಭೂಮರೆಡ್ಡಿ ಸೇರಿ ಇತರರೆ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
ಎಳನೀರು ಕಳ್ಳರ ಬಂಧನ: ಜೀವನೋಪಾಯಕ್ಕಾಗಿ ರಸ್ತೆಬದಿಯಲ್ಲಿ ಮಾರಾಟಕ್ಕಿಡುತ್ತಿದ್ದ ಎಳನೀರನ್ನು ಕದ್ದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಜಯನಗರ ಠಾಣಾ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಗೌತಮ್, ರಘು ಹಾಗೂ ಮಣಿಕಂಠ ಬಂಧಿತರು. ಆರೋಪಿಗಳು ಟಾಟಾ ಏಸ್ ವಾಹನದಲ್ಲಿ ಬಂದು 1,500 ಎಳನೀರು ಕದ್ದು ತಲೆಮರೆಸಿಕೊಂಡಿದ್ದರು.
ಇದನ್ನೂ ಓದಿ : Server Hack: ಅಮೆಜಾನ್ ಕಂಪನಿ ಸರ್ವರ್ ಹ್ಯಾಕ್, ಕೋಟ್ಯಂತರ ಹಣ ವಂಚನೆ; ಓರ್ವನ ಬಂಧನ