ETV Bharat / state

ಶಿವಮೊಗ್ಗ ಕಲ್ಲು ಕ್ವಾರಿ ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಸಿಎಂ ಭೇಟಿ - CM BS Yadiyurappa

ಶಿವಮೊಗ್ಗ ತಾಲೂಕಿನ ಹುಣಸೋಡು ಕಲ್ಲು ಕ್ವಾರಿಯಲ್ಲಿ ಜಿಲೆಟಿನ್​ ಸ್ಫೋಟಗೊಂಡ ಸ್ಥಳಕ್ಕೆ ಮುಖ್ಯಮಂತ್ರಿ ಬಿ.‌ಎಸ್. ಯಡಿಯೂರಪ್ಪ ಇಂದು ಸಂಜೆ ಭೇಟಿ ನೀಡಲಿದ್ದಾರೆ.

CM Visits
ಮುಖ್ಯಮಂತ್ರಿ ಬಿ.‌ಎಸ್. ಯಡಿಯೂರಪ್ಪ
author img

By

Published : Jan 23, 2021, 12:17 PM IST

ಶಿವಮೊಗ್ಗ: ಗುರುವಾರ ರಾತ್ರಿ ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್​ ಸ್ಫೋಟಗೊಂಡ ಪ್ರದೇಶಕ್ಕೆ ಮುಖ್ಯಮಂತ್ರಿ ಬಿ.‌ಎಸ್. ಯಡಿಯೂರಪ್ಪ ಇಂದು ಸಂಜೆ ಭೇಟಿ ನೀಡಲಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್​ಗೆ ಬಂದು ನಂತರ ಹುಣಸೋಡು ಕಲ್ಲು ಕ್ವಾರಿ ಸ್ಫೋಟಗೊಂಡ ಸ್ಥಳಕ್ಕೆ ಸಿಎಂ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಓದಿ: ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಡಲ್ಲ: ಸಿಎಂ ಖಡಕ್​ ಎಚ್ಚರಿಕೆ

ಬಳಿಕ ರಾತ್ರಿ 7.30ಕ್ಕೆ ನಗರದ ಹೊರ ವಲಯದಲ್ಲಿರುವ ಪ್ರೇರಣ ಕನ್ವೆನ್ಷನ್ ಹಾಲ್​​ನಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಪುತ್ರನ ಆರತಕ್ಷತೆ ಕಾರ್ಯಕ್ರಮದಲ್ಲಿ ಬಿಎಸ್​ವೈ ಭಾಗಿಯಾಗಲಿದ್ದಾರೆ. ಅಲ್ಲದೇ ಇಂದು ಶಿವಮೊಗ್ಗದಲ್ಲೇ ವಾಸ್ತವ್ಯ ಹೊಡಲಿದ್ದಾರೆ ಎನ್ನಲಾಗ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.