ETV Bharat / state

ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಡಿಸಿ ಸೂಚನೆ - ಶಿವಮೊಗ್ಗ ಡಿಸಿ ಸಭೆ

ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

shivamogga-district-collector-who-held-a-meeting
ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸಭೆ
author img

By

Published : May 28, 2021, 8:59 AM IST

ಶಿವಮೊಗ್ಗ: ಕೊರೊನಾ ಪ್ರಕರಣಗಳು 10ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್‌ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಂಟೈನ್‌ಮೆಂಟ್ ಪ್ರದೇಶದ ಪ್ರತಿ ಮನೆಗಳಿಗೆ ಆಶಾ ಕಾರ್ಯಕರ್ತೆಯರು ಪ್ರತಿ ದಿನ ಭೇಟಿ ನೀಡಿ ಆರೋಗ್ಯ ಸ್ಥಿತಿಗತಿ ಪರಿಶೀಲನೆ ನಡೆಸಿ, ರೋಗ ಲಕ್ಷಣವಿರುವ ಪ್ರತಿಯೊಬ್ಬರಿಗೂ ಕೊರೊನಾ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಸಾಮಾಗ್ರಿಗಳನ್ನು ಅಗತ್ಯವಿರುವವರಿಗೆ ಮನೆಯ ಬಾಗಿಲಿಗೆ ತಲುಪಿಸಬೇಕು. ಕಂಟೈನ್‌ಮೆಂಟ್ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಿ, ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ಮೊಬೈಲ್‌ನಲ್ಲಿ ಫೋಟೋ ಅಥವಾ ವಿಡಿಯೋ ತೆಗೆದು ಪೊಲೀಸರಿಗೆ ದೂರು ನೀಡಿ ಎಂದು ಹೇಳಿದರು.

ಹಾಟ್‌ಸ್ಪಾಟ್ ಗುರುತಿಸಿ: ಗ್ರಾಮೀಣ ಭಾಗದಲ್ಲಿ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿದ್ದು, ಅದರಲ್ಲೂ ಗಡಿ ಭಾಗದ ಗ್ರಾಮಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಅಂತಹ ಕೊರೊನಾ ಹಾಟ್‌ಸ್ಪಾಟ್‌ಗಳನ್ನು ಗುರುತಿಸಿ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಿ. ಅಂತಹ ಕಡೆಗಳಲ್ಲಿ ಸಂಚಾರಿ ವಾಹನಗಳ ಮೂಲಕ ಕೊರೊನಾ ಪರೀಕ್ಷೆ ನಡೆಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.