ಬೆಂಗಳೂರು: ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 33 ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 33 ಹುದ್ದೆಗಳ ವಿವರ ಹೀಗಿದೆ.
- ಪ್ರೊಸೆಸ್ ಸರ್ವರ್ - 5
- ಜವಾನ - 28
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವೇತನ: ಪ್ರೊಸೆಸ್ ಸರ್ವ್ ಹುದ್ದೆಗೆ 19,950-37,900 ರೂ ಮಾಸಿಕ ವೇತನ ಹಾಗೂ ಜವಾನ ಹುದ್ದೆಗೆ 17,000- 28,950 ರೂ ಮಾಸಿಕ ವೇತನ ನಿಗದಿ ಮಾಡಲಾಗಿದೆ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ಪೂರ್ಣಗೊಂಡಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಹುದ್ದೆಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಹಾಗೂ ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ವಿವರ: ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 100 ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಅಭ್ಯರ್ಥಿಗಳು ಡಿಸೆಂಬರ್ 15 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 16 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಡಿಸೆಂಬರ್ 17 ಆಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರಗಳಿಗೆ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://shivamogga.dcourts.gov.in/notice-category/recruitments ಅಥವಾ https://karnatakajudiciary.kar.nic.in/districtrecruitment.php ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಟ; ಇಲ್ಲಿದೆ ಹುದ್ದೆ ವಿವರ