ಶಿವಮೊಗ್ಗ: ಪತ್ನಿಯನ್ನು ಹತ್ಯೆಗೈದ ಪತಿಗೆ 5 ವರ್ಷಗಳ ಸುದೀರ್ಘ ವಿಚಾರಣೆಯ ಬಳಿಕ ಶಿವಮೊಗ್ಗ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಹಾಲ ಲಕ್ಕವಳ್ಳಿಯ ನಿವಾಸಿ ಮಂಜುನಾಥ್ ಶಿಕ್ಷೆಗೆ ಗುರಿಯಾದ ವ್ಯಕ್ತಿ.
ಏನಿದು ಪ್ರಕರಣ?: ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಮಹಿಳೆಯೊಬ್ಬಳನ್ನು ಆಕೆಯ ಪತಿ ಹತ್ಯೆಗೈದಿದ್ದ. ಮಂಜುನಾಥ (ಪತಿ) ಕೊಲೆ ಆರೋಪಿ. ಈತನ ಕಾಟದಿಂದ ಬೇಸತ್ತು ಆಶ್ರಯ ಬಡಾವಣೆಯಲ್ಲಿ ನೆಲೆಸಿದ್ದಳು. ಇಲ್ಲಿಗೂ ಬಂದು ಮಂಜುನಾಥ್ ಜಗಳ ಮಾಡುತ್ತಿದ್ದನಂತೆ. ಹೀಗೆ ಒಂದು ದಿನ ಜಗಳ ತಾರಕಕ್ಕೇರಿ ಮಾರಕಾಸ್ತ್ರದಿಂದ ಹೊಡೆದು ಹತ್ಯೆಗೈದು ಪರಾರಿಯಾಗಿದ್ದಾನೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ವಿನೋಬ ನಗರ ಪೊಲೀಸರು ಮಂಜುನಾಥ್ನನ್ನು ಬಂಧಿಸಿದ್ದರು. ಅಂದಿನ ಸಿಪಿಐ ವಸಂತ ಕುಮಾರ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಾದ ಅಲಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಾನು.ಕೆ.ಎಸ್ ಅವರು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಕಟ್ಟಲು ವಿಫಲವಾದರೆ ಹೆಚ್ಚುವರಿಯಾಗಿ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರ ವಕೀಲ ಮಮತ ವಾದ ಮಂಡಿಸಿದ್ದರು.
ಇದನ್ನೂ ಓದಿ: ಮಗಳನ್ನು ಕೊಲೆ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ: ಚಿಕ್ಕೋಡಿ ಕೋರ್ಟ್ನಿಂದ ಮಹತ್ವದ ತೀರ್ಪು..!