ETV Bharat / state

ಬಜರಂಗದಳದ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣ: ತನಿಖೆ ಕುರಿತು ಐಜಿಪಿ ಮಾಹಿತಿ - ಐಜಿಪಿ ರವಿ ಮಾಧ್ಯಮಗೋಷ್ಟಿ

ಬಜರಂಗದಳದ ಕಾರ್ಯಕರ್ತರನ ಮೇಲಿನ ಹಲ್ಲೆ ನಂತರ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ವ ವಲಯದ ಐಜಿಪಿ ರವಿ.ಎಸ್ ಮಾಹಿತಿ ನೀಡಿದರು. ಆರೋಪಿಗಳ ಬಂಧಿಸಲು ಕಾರ್ಯಚರಣೆ ಮುಂದುವರಿದಿದೆ ಎಂದು ತಿಳಿಸಿದರು. ಇದೇ ವೇಳೆ ವದಂತಿಗಳಿಗೆ ಕಿವಿಗೊಡದಂತೆ ಸಾರ್ವಜನಿಕರಿಗೆ ಹೇಳಿದರು.

IGP Ravi
ಐಜಿಪಿ ರವಿ
author img

By

Published : Dec 4, 2020, 1:42 PM IST

Updated : Dec 4, 2020, 2:25 PM IST

ಶಿವಮೊಗ್ಗ : ಸಾಮಾಜಿಕ ಜಾಲತಾಣಗಳಲ್ಲಿ ಬರುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬೇಡಿ ಎಂದು ಪೂರ್ವ ವಲಯದ ಐಜಿಪಿ ರವಿ ಎಸ್ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಐಜಿಪಿ ನೇತೃತ್ವದಲ್ಲಿ ನಡೆದ ಮಾಧ್ಯಮಗೋಷ್ಟಿ

ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ನಂತರ ನಡೆದ ಗಲಭೆ ಉಂಟಾಗಿದ್ದಕ್ಕೆ ಸಂಬಂಧಿಸಿದಂತೆ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ದೊಡ್ಡಪೇಟೆ ಹಾಗೂ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಎಫ್​ಐಆರ್​ ದಾಖಲಿಸಲಾಗಿದೆ. ಹಲ್ಲೆ ನಡೆಸಿದವರ ಬಂಧನಕ್ಕೆ ಕಾರ್ಯಾಚರಣೆ ನಡೆಯುತ್ತಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎನ್ನುವ ಆಶ್ವಾಸನೆ ನೀಡಿದರು.

ಓದಿ...ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ: ಸಹಜ ಸ್ಥಿತಿಯತ್ತ ಮರಳಿದ ಶಿವಮೊಗ್ಗ

ಗುರುವಾರದಿಂದ ಇಲ್ಲಿಯವರೆಗೂ ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಹಾಗಾಗಿ ನಗರದಲ್ಲಿ ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, 148 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ. ಹಾಗೆಯೇ ಜಿಲ್ಲೆಯ ಗಡಿಭಾಗದಲ್ಲಿ 9 ಚೆಕ್​ ಪೋಸ್ಟ್​ಗಳನ್ನು ಹಾಕುವ ಮೂಲಕ ಬೇರೆ ಜಿಲ್ಲೆಯಿಂದ ಬರುವ ದುಷ್ಕರ್ಮಿಗಳನ್ನು ತಡೆಯುವ ಪ್ರಯತ್ನ ಮಾಡಲಾಗಿದೆ. ಯಾವುದೇ ರೀತಿಯಲ್ಲಿಯೂ ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸ್​ ಇಲಾಖೆ ನೋಡಿಕೊಳ್ಳುತ್ತದೆ ಎಂದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ನಗರದಲ್ಲಿ ದೊಡ್ಡಪೇಟೆ, ಕೋಟೆ ಪೊಲೀಸ್​ ಠಾಣೆ, ಜಯನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆಯೂ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳಿಗೆ ಯಾವುದೇ ಆತಂಕ ಬೇಡ ಹಾಗೂ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಎಸ್​ಪಿ ಕೆ.ಎಂ ಶಾಂತರಾಜು

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ವದಂತಿಗಳನ್ನು ಹರಡುವವರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವ, ಯಾವುದೇ ವರ್ಗ ಅಥವಾ ಸಮುದಾಯದ ವಿರುದ್ಧ ಅಪರಾಧ ಮಾಡುವಂತೆ ಪ್ರಚೋದಿಸುವ ಬರಹಗಳನ್ನು ವಾಟ್ಸಪ್, ಫೇಸ್‌ಬುಕ್‌ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ಹರಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್​ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಓದಿ...ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿ

Last Updated : Dec 4, 2020, 2:25 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.