ಶಿವಮೊಗ್ಗ: ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ತೆರೆದು ಅಶ್ಲೀಲ ಫೋಟೋಗಳನ್ನು ಹಾಕಿ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಪ್ರದೇಶದ ರೇಣುಗುಂಟ ನಿವಾಸಿ ಬಷೀರ್ (26) ಬಂಧಿತ ಆರೋಪಿ. ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಯುವತಿ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕಲಂ 66(ಸಿ), 66(ಡಿ) ಐಟಿ ಕಾಯ್ದೆ ಮತ್ತು 354(ಎ), 354(ಡಿ), 419, 506 ಐಪಿಸಿ ಅಡಿ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ್ದ 2 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ.