ETV Bharat / state

ಶಿವಮೊಗ್ಗಕ್ಕೂ ಉಗ್ರರ ನಂಟು: ಶಂಕಿತ ಯುವಕರ ಬಂಧನ - ಎಸ್​ಪಿ ಮಾಹಿತಿ - ಶಿವಮೊಗ್ಗದ ಡಿವೈಎಸ್​​​ಪಿ ಬಾಲರಾಜ್

ಮಲೆನಾಡು ಶಿವಮೊಗ್ಗಕ್ಕೂ ಉಗ್ರರ ನಂಟು ತಗುಲಿರುವ ಶಂಕೆ ವ್ಯಕ್ತವಾಗುತ್ತಿದೆ. ಉಗ್ರ ಸಂಘಟನೆ ಜೊತೆ ಸಂಪರ್ಕ ಶಂಕೆ ಮೇರೆಗೆ ಮೂವರ ವಿರುದ್ಧ ಶಿವಮೊಗ್ಗ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಶಿವಮೊಗ್ಗಕ್ಕೂ ಉಗ್ರರ ನಂ
ಶಿವಮೊಗ್ಗಕ್ಕೂ ಉಗ್ರರ ನಂ
author img

By

Published : Sep 20, 2022, 4:27 PM IST

Updated : Sep 20, 2022, 6:35 PM IST

ಶಿವಮೊಗ್ಗ: ಮಲೆನಾಡಿಗೂ ಉಗ್ರರ ನಂಟು ತಗುಲಿವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪೂರಕ್ಕೆ ಎಂಬಂತೆ ಶಿವಮೊಗ್ಗ ಜಿಲ್ಲೆಯ ಇಬ್ಬರುಮತ್ತು ಮಂಗಳೂರು ಮೂಲದ ಓರ್ವನ ವಿರುದ್ಧ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಕಾರಣ ಇವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ.

ಮೂವರು ಶಂಕಿತರಾದ ಶಿವಮೊಗ್ಗದ ಸಿದ್ದೇಶ್ವರ ನಗರದ ನಿವಾಸಿ ಸಯ್ಯದ್ ಯಾಸೀನ್(21) ಹಾಗೂ ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ (22) ಮತ್ತು ತೀರ್ಥಹಳ್ಳಿ ಸೂಪ್ಪುಗುಡ್ಡೆಯ ನಿವಾಸಿ ಶಾರೀಕ್ ಮೇಲೆ ಯುಎಪಿಎ (UNLAWFUL ACTIVITIES (PREVEVNTION ACT) 1967 ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ.

ಎಸ್​ಪಿ ಮಾಹಿತಿ

ಇದರಲ್ಲಿ ಸೈಯದ್ ಯಾಸೀನ್ ಹಾಗೂ ಮಾಜ್ ಮುನೀರ್ ಅಹಮ್ಮದ್​ನನ್ನು ಬಂಧಿಸಿ ವಿಚಾರಣೆ ನಡೆಸಿ, ಶಿವಮೊಗ್ಗದ ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಕೋರ್ಟ್​​ಗೆ ಹಾಜರು ಪಡಿಸಿ 7 ದಿನ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎಸ್​ಪಿ ಲಕ್ಷ್ಮಿ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಇವರನ್ನು ನಿನ್ನೆ ವಶಕ್ಕೆ ಪಡೆಯಲಾಗಿದ್ದು, ಇನ್ನಷ್ಟು ವಿಚಾರಣೆಗೆ ಒಳಪಡಿಸಿದಾಗ ಮಾಹಿತಿ ಲಭ್ಯವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ‌. ಸೈಯ್ಯದ್ ಯಾಸೀನ್ ವಿಚಾರಣೆಗೆ ಒಳಪಡಿಸಲಾಗಿದೆ. ಈತನ ಹಿನ್ನೆಲೆ ಇನ್ನಷ್ಟೆ ಹೊರ ಬರಬೇಕಿದೆ. ಮಾಜ್ ಹಾಗೂ ಶಾರೀಕ್ ರವರು ಮಂಗಳೂರಿನಲ್ಲಿ ಗೋಡೆ ಬರಹ ಪ್ರಕರಣದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಶಿವಮೊಗ್ಗಕ್ಕೂ ಉಗ್ರರ ನಂಟು ಶಂಕೆ: ಶಿವಮೊಗ್ಗದ ಪ್ರತಿಷ್ಠಿತ ಇಂಜಿನಿಯರ್ ಕಾಲೇಜಿನಲ್ಲಿ ಯಾಸೀನ್ ವಿದ್ಯಾಭ್ಯಾಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪು ಗುಡ್ಡೆಯ ಶಾರೀಕ್ ಎಂಬಾತ ಪರಾರಿಯಾಗಿದ್ದು, ಆತನ ವಶಕ್ಕೆ ಬಲೆ ಬೀಸಲಾಗಿದೆ.

ಕಳೆದ ಆಗಸ್ಟ್ 15 ರಲ್ಲಿ ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಜೀಬಿವುಲ್ಲಾನನ್ನು ವಿಚಾರಣೆಗೆ ಒಳಪಡಿಸಿದಾಗ ಈ ಮೂವರ ಜೊತೆ ಸಂಪರ್ಕದಲ್ಲಿರುವ ಬಗ್ಗೆ ಆತನ ಮೊಬೈಲ್ ಫೋನ್​​ನಲ್ಲಿ ಪತ್ತೆಯಾಗಿದೆ‌. ಇದರ ಮೇಲೆ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

(ಇದನ್ನೂ ಓದಿ: ಬೆಂಗಳೂರು, ತಮಿಳುನಾಡಿನಲ್ಲಿ ಬಂಧಿತರಾಗಿದ್ದ ಶಂಕಿತ ಉಗ್ರರ ಪ್ರಕರಣ: ಎನ್‌ಐಎಗೆ ವರ್ಗಾವಣೆ!)

Last Updated : Sep 20, 2022, 6:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.