ಶಿವಮೊಗ್ಗ: ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆಯ ರೂವಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪೊಲೀಸರ ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದಿರುವ ಹಲ್ಲೆ ಖಂಡನೀಯ. ಈ ಘಟನೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸುತ್ತೇದೆ. ಕೂಡಲೇ ಘಟನೆಯ ಹಿಂದೆ ಇರುವ ಘಾತುಕ ಶಕ್ತಿಗಳನ್ನು ಪತ್ತೆ ಹಚ್ಚಿ, ಅಂತವರ ವಿರುದ್ಧ ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.
ಸಾರ್ವಜನಿಕ ಆಸ್ತಿ ಹಾನಿ ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಬೇಕು ಹಾಗೂ ಎಲ್ಲಾ ರಾಜಕೀಯ ಪಕ್ಷಗಳು ಮತ ಬ್ಯಾಂಕ್ಗಾಗಿ ಮೃದು ಧೋರಣೆ ತೊರದೆ ಗಲಭೆ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.