ETV Bharat / state

ಕೋಮು ಪ್ರಚೋದನೆ ಹೇಳಿಕೆ: ಈಶ್ವರಪ್ಪ ವಿರುದ್ಧ ಎಸ್​ಡಿಪಿಐ ಪ್ರತಿಭಟನೆ

ಕೋಮು ಪ್ರಚೋದನೆ ಹುಟ್ಟು ಹಾಕುವ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್​ಡಿಪಿಐ ಸಂಘಟನೆ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ.

author img

By

Published : Aug 6, 2020, 3:59 PM IST

SDPI protests against Minister KS Eshwarappa
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಸ್​ಡಿಪಿಐ ಪ್ರತಿಭಟನೆ

ಶಿವಮೊಗ್ಗ: ಕೋಮು ಪ್ರಚೋದನಕಾರಿ ಹಾಗೂ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಚಿವ ಕೆ.ಎಸ್ .ಈಶ್ವರಪ್ಪನವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಥುರಾ ಮತ್ತು ಕಾಶಿಯಲ್ಲಿರುವ ಮಸೀದಿಗಳು ಗುಲಾಮಗಿರಿಯ ಸಂಕೇತದಂತೆ ಕಾಣುತ್ತಿವೆ. ಮುಂದಿನ ದಿನಗಳಲ್ಲಿ ಕಾಶಿ ಹಾಗೂ ಮಥುರಾದಲ್ಲೂ ಮಸೀದಿಗಳು ದ್ವಂಸ ಆಗಿ ಅಲ್ಲಿಯೂ ಭವ್ಯ ಮಂದಿರಗಳು ನಿರ್ಮಾಣವಾಗಲಿವೆ ಎಂದು ವಿವಾದಾತ್ಮಕ ಹೇಳಿಕೆ‌ ನೀಡಿರುವುದು ಖಂಡನಿಯ. ಇಂತಹ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಕದಡುತ್ತದೆ. ಕೂಡಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ, ಸಚಿವರು ಮುಂದಿನ ದಿನಗಳಲ್ಲಿ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದರೆ ಅವರ ಮನೆಮುಂದೆ ಹಾಗೂ ಕಛೇರಿ ಎದುರು ಧರಣಿ ಕುರಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.