ETV Bharat / state

ಶಿವಮೊಗ್ಗ: ತಂದೆಯ ಅಂತಿಮ ದರ್ಶನಕ್ಕೆ ಶಂಕಿತ ಉಗ್ರನನ್ನು ಕರೆದೊಯ್ದ ಪೊಲೀಸರು - ಈಟಿವಿ ಭಾರತ ಕನ್ನಡ

ಶಿವಮೊಗ್ಗದಲ್ಲಿ ಬಂಧಿತನಾದ ಶಂಕಿತ ಉಗ್ರ ಮಾಜ್ ಮುನೀರ್ ಅಹಮ್ಮದ್​ಗೆ ತಂದೆಯ ಅಂತಿಮ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ.

police-took-suspected-terrorist-to-his-father-last-rites
ಶಿವಮೊಗ್ಗ: ತಂದೆಯ ಅಂತಿಮ ದರ್ಶನಕ್ಕೆ ಶಂಕಿತ ಉಗ್ರನನ್ನು ಕರೆದೊಯ್ದ ಪೊಲೀಸರು
author img

By

Published : Sep 24, 2022, 1:19 PM IST

ಶಿವಮೊಗ್ಗ: ನಗರದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾದ ಶಂಕಿತ ಉಗ್ರ ಮಾಜ್ ಮುನೀರ್ ಅಹಮ್ಮದ್ ತಂದೆ ಶುಕ್ರವಾರ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಇಂದು ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆರೋಪಿಗೆ ಅವಕಾಶ ನೀಡಲಾಗಿದೆ. ಮುನೀರ್ ಅಹಮ್ಮದ್​ನನ್ನು ಪೊಲೀಸರು ಇಂದು ಶಿವಮೊಗ್ಗ ಪೊಲೀಸರು ತೀರ್ಥಹಳ್ಳಿಗೆ ಕರೆದೊಯ್ದಿದ್ದಾರೆ.

ತೀರ್ಥಹಳ್ಳಿಯ ಸೂಪ್ಪುಗುಡ್ಡೆಯಲ್ಲಿನ ಮಾಜ್ ನಿವಾಸಕ್ಕೆ ಕರೆದುಕೊಂಡು ಹೋಗಿ ಅಂತಿಮ ದರ್ಶನದ ಬಳಿಕ ವಾಪಸ್ ಕರೆದುಕೊಂಡು ಬರಲಾಗುತ್ತದೆ. ಶಂಕಿತ ಉಗ್ರರ ಬಂಧನ ತಂಡದ ಡಿವೈಎಸ್​​ಪಿ ಶಾಂತವೀರಯ್ಯ ಅವರು ಪೊಲೀಸ್ ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ.

ಇಂದು ಮಧ್ಯಾಹ್ನ ಮಾಜ್​ ತಂದೆಯ ಅಂತಿಮ ಸಂಸ್ಕಾರ ತೀರ್ಥಹಳ್ಳಿಯ ಖಬರಸ್ಥಾನದಲ್ಲಿ ನಡೆಯಲಿದೆ. ಅಲ್ಲಿ ಅಂತಿಮ ದರ್ಶನದ ಬಳಿಕ ಪುನಃ ಶಿವಮೊಗ್ಗಕ್ಕೆ ಕರೆದುಕೊಂಡು ಬರಲಾಗುತ್ತದೆ.

ಇದನ್ನೂ ಓದಿ: ವಿಡಿಯೋ ನೋಡಿ ಬಾಂಬ್ ತಯಾರಿಕೆ, ತುಂಗಾ ನದಿ ಬಳಿ ಟ್ರಯಲ್ ಬ್ಲಾಸ್ಟ್: ಶಂಕಿತ ಉಗ್ರರ ಸಂಚಿನ ಬಗ್ಗೆ ಶಿವಮೊಗ್ಗ ಎಸ್ಪಿ ಮಾಹಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.