ETV Bharat / state

ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಡಿಸಿ - Etv Bharat Kannada

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ.

shivmogga-dc-visits-meggan-hospital
ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಡಿಸಿ
author img

By

Published : Jan 17, 2023, 5:10 PM IST

ಶಿವಮೊಗ್ಗ: ಜಿಲ್ಲೆಯ ಗೋಂದಿ ಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರದಂದು ಮಧ್ಯಾಹ್ನದ ಊಟ ಸೇವಿಸಿ 90ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು. ಕೂಡಲೇ ಅಸ್ವಸ್ಥ ವಿದ್ಯಾರ್ಥಿನಿಯರನ್ನು ನಗರದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಜಿಲ್ಲಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.

ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ ಮೆಗ್ಗಾನ್​ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಬಳಿಕ ಮಾತನಾಡಿದ ಅವರು, ನಿನ್ನೆಯಿಂದ ಇಲ್ಲಿಯವರೆಗೆ 108 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಆರೋಗ್ಯವಾಗಿದ್ದು, ಯಾವುದೇ ತೊಂದರೆ ಇಲ್ಲ. ಈಗಾಗಲೇ 70ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು, ತಡವಾಗಿ ದಾಖಲಾದ ವಿದ್ಯಾರ್ಥಿಗಳನ್ನು ಇನ್ನು ಸ್ವಲ್ಪ ಕಾಲ ನಿಗಾ ವಹಿಸಿ ಅವರನ್ನೂ ಸಹ ಬಿಡುಗಡೆಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಳಿಕ ಸಿಮ್ಸ್​​ ನಿರ್ದೇಶಕ ಡಾ.ವಿರೂಪಾಕ್ಷಪ್ಪ ಮಾತನಾಡಿ, ದಾಖಲಾಗಿರುವ ಎಲ್ಲ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಯಾವುದೇ ಸಮಸ್ಯೆ ಇಲ್ಲ. ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲ ಮಕ್ಕಳ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ ಎಂದರು. ಮಕ್ಕಳು ನಿನ್ನೆ ಮಧ್ಯಾಹ್ನ ಊಟದ ವೇಳೆ ಚಪಾತಿ, ಪಲ್ಯ, ಅನ್ನ ಸಾಂಬಾರು ಸೇವಿಸಿದ್ದರು. ಅದಾದ ಬಳಿಕ ಅಸ್ವಸ್ಥರಾಗಿದ್ದಾರೆ‌. ಕೆಲವರಿಗೆ ಹೊಟ್ಟೆ ನೋವು, ಇನ್ನೂ ಕೆಲವರಿಗೆ ವಾಂತಿ ಆಗಿದೆ. ಮತ್ತೆ ಕೆಲವರು ತಲೆ ಸುತ್ತಿ ಬಿದ್ದಿದ್ದಾರೆ. ಆದ್ರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಬಿಸಿಯೂಟದಲ್ಲಿ ಹಲ್ಲಿ ಅಲ್ಲ, ಹಾವು! 20 ವಿದ್ಯಾರ್ಥಿಗಳು ಅಸ್ವಸ್ಥ, ಶಿಕ್ಷಕರ ವಾಹನ ಧ್ವಂಸ

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್, ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ಇತರ ವೈದ್ಯಾಧಿಕಾರಿಗಳು, ಅಧಿಕಾರಿಗಳು ಹಾಜರಿದ್ದರು.

ಶಾಸಕ ಅಶೋಕ್ ನಾಯ್ಕ್​ ಆಸ್ಪತ್ರೆ ಭೇಟಿ : ಇನ್ನೂ ಬೆಳಗ್ಗೆ ಮೆಗ್ಗಾನ್ ಆಸ್ಪತ್ರೆಗೆ ಶಾಸಕ ಅಶೋಕ್​ ನಾಯ್ಕ್​ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮದೊಂದಗಿ ಮಾತನಾಡಿ, ಮೊರಾರ್ಜಿ ಶಾಲೆಯ 80ರಷ್ಟು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೆಲವು ಮಕ್ಕಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ 15 ಮಕ್ಕಳಿಗೆ ಶಾಲೆಯಲ್ಲಿ ಉಪಚರಿಸಲಾಗುತ್ತಿದೆ. ಮೇಲ್ನೋಟಕ್ಕೆ ನೀರಿನಿಂದ ತೊಂದರೆ ಆಗಿರುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಕಂಡುಕೊಳ್ಳಲು ಆಹಾರ, ನೀರು ಮತ್ತು ವಾಂತಿಯ ಸ್ಯಾಂಪಲ್ ಪಡೆದು ಟೆಸ್ಟ್​ಗೆ ಕಳುಹಿಸಲಾಗಿದೆ. ಎಲ್ಲ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ವಿದ್ಯಾರ್ಥಿನಿಯರು ಅಸ್ವಸ್ಥ.. ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲು

ಆರೋಗ್ಯದಲ್ಲಿ ಚೇತರಿಕೆ ಕಂಡ ಮಕ್ಕಳ ಡಿಸ್ಚಾರ್ಜ್: ಅಸ್ವಸ್ಥರಾಗಿದ್ದ ಕೆಲ ಮಕ್ಕಳು ಇಂದು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನೂ ಕೇಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡಿರುವಂತಹ ಮಕ್ಕಳಿಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ.

ಘಟನೆ ಹಿನ್ನೆಲೆ: ನಿನ್ನೆ ದಿನ ಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ ಅನೇಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಿಲಾಗಿದ್ದರು. ಮಧ್ಯಾಹ್ನದ ಆಹಾರ ಸೇವನೆ ಬಳಿಕ ಏಕಾಏಕಿ ವಿದ್ಯಾರ್ಥಿನಿಯರಲ್ಲಿ ವಾಂತಿ, ತಲೆಸುತ್ತುವಿಕೆಯಂತಹ ಸಮಸ್ಯೆಗಳು ಕಾಣಿಸಿದ್ದವು. ಸುಮಾರು 300 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆ ಇದಾಗಿದೆ. ಘಟನೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ಶಿವಮೊಗ್ಗ: ಮಧ್ಯಾಹ್ನದ ಊಟ ಸೇವಿಸಿ 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.