ಶಿವಮೊಗ್ಗ: ಸರ್ಕಾರ ತರಾತುರಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಹೊರಟಿರುವ ಕ್ರಮವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂತಹ ಸಮಯದಲ್ಲಿ ರಾಜ್ಯ ಸರ್ಕಾರ ಶಾಲೆಗಳನ್ನು ತೆರೆಯಲು ಹೊರಟಿದೆ. ಕೊರೊನಾ ವೈರಸ್ ಕಡಿಮೆಯಾಗುವವರೆಗೂ ಶಾಲೆಗಳನ್ನು ತೆರೆಯಬಾರದು. ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚು ಎಂದರು.
ಕೆಲ ಖಾಸಗಿ ಶಾಲೆಗಳು ನೂತನ ನೋಂದಣಿ ಪ್ರಾರಂಭಿಸಿದ್ದು, ಇದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಬೇಕು ಹಾಗೂ ಕೊರೊನಾ ಕಡಿಮೆಯಾದ ನಂತರ ಶಾಲೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.