ಶಿವಮೊಗ್ಗ: ಭದ್ರಾವತಿ ತಾಲೂಕಿನ ಹಾಲಪ್ಪ ವೃತ್ತದ ಬಳಿಯ ಸೌತ್ ಇಂಡಿಯಾ ಬ್ಯಾಂಕ್ನಲ್ಲಿ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ.
ಕಿಟಕಿಯಿಂದ ಹೊಗೆ ಕಾಣಿಸಿಕೊಂಡ ನಂತರ ಪಕ್ಕದ ಕಟ್ಟಡದ ಸೆಕ್ಯೂರಿಟಿ ಗಾರ್ಡ್ ಗಮನಿಸಿ ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ತಕ್ಷಣ ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆದರೆ, ಬೆಂಕಿಯ ಜ್ವಾಲೆ ಹೆಚ್ಚಾಗುತ್ತಲೇ ಹೋಗಿದ್ದರಿಂದ ಶಿವಮೊಗ್ಗದಿಂದ ಅಗ್ನಿ ಶಾಮಕ ದಳ ಬರಬೇಕಾಯಿತು. ಬೆಂಕಿಯ ಕೆನ್ನಾಲಿಗೆ ಹಾಗೂ ದಟ್ಟ ಹೊಗೆಯಿಂದಾಗಿ ಬ್ಯಾಂಕ್ ಒಳಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಬ್ಯಾಂಕ್ನಲ್ಲಿನ ದಾಖಲೆಗಳು ಬೆಂಕಿಗೆ ಆಹುತಿಯಾಗಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.