ಶಿವಮೊಗ್ಗ: ಕೇಂದ್ರ ಬಿಜೆಪಿ ಸರ್ಕಾರ ಹೊರಡಿಸಿರುವ ಕಿಸಾನ್ ವಿರೋಧಿ ಮಸೂದೆ ಹಾಗೂ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆದೇಶದ ಮೇರೆಗೆ ಇಂದು ಶಿವಮೊಗ್ಗ ನಗರದ ಶಾಂತಿನಗರ ಹಾಗೂ ಮಲ್ಲಿಕಾರ್ಜುನ ನಗರ ಬಡಾವಣೆಗಳಲ್ಲಿ ಸಹಿ ಸಂಗ್ರಹಣೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮ ಈ ತಿಂಗಳ ಅಂತ್ಯದವರೆಗೂ ನಡೆಯಲಿದ್ದು, ಕರ್ನಾಟಕ ರಾಜ್ಯಾದ್ಯಂತ ಸಂಪೂರ್ಣ ಸಹಿ ಹಾಕಿದ ಪ್ರತಿಗಳನ್ನು ಪಕ್ಷದ ಮುಖಂಡರ ಮುಖಾಂತರ ರಾಷ್ಟ್ರಪತಿಗಳಿಗೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಮಹಾ ನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಹೆಚ್. ಸಿ. ಯೋಗೇಶ್ ಅವರು ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನಾಗರಾಜ್ , 4ನೇ ವಾರ್ಡ್ನ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಂ ಮಹದೇವ್, ಕಮಲಾ. ಪಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.