ETV Bharat / state

ಸರಳವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ: ಸಚಿವ ಈಶ್ವರಪ್ಪ

ಶಿವಮೊಗ್ಗದಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲು ಜಿಲ್ಲಾಡಳಿತ ಅನುಮತಿ ನೀಡಲಿದೆ. ಸಾರ್ವಜನಿಕ ಗಣೇಶ ಕೂರಿಸಲು ಸರ್ಕಾರದ ನಿಯಮಗಳ ಜೊತೆಗೆ ಜಿಲ್ಲಾಡಳಿತ, ಸಂಘ, ಸಂಸ್ಥೆಗಳು ಸೇರಿ ಮಾರ್ಗಸೂಚಿ ತಯಾರಿಸಲಾಗಿದ್ದು, ಅದರಂತೆ ಗಣೇಶ ಮಂಡಳಿಗಳು ನಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

minister K.S.Ishwarappa
ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ
author img

By

Published : Aug 19, 2020, 12:12 AM IST

ಶಿವಮೊಗ್ಗ: ಕೊರೊನಾ ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಲು ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ ಎಂದು ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ

ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಅನುಕೂಲವಾಗುವಂತೆ ಕೆಲವು ವಿಷಯಗಳನ್ನು ಸೇರಿಸಿ, ಮಾರ್ಪಾಡಿಸಿ, ಅನುಷ್ಠಾನಗೊಳಿಸಲು ಜಿಲ್ಲಾಡಳಿತ ಉದ್ದೇಶಿಸಿದೆ ಎಂದರು.

ಈ ಮಾರ್ಗಸೂಚಿಯನ್ನು ಅನುಷ್ಠಾನಗೊಳಿಸುವ ಮುನ್ನ ಜಿಲ್ಲೆಯ ಸ್ಥಳೀಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಸರ್ಕಾರ ಕೈಗೊಂಡ ನಿರ್ಣಯದಂತೆ ಹಬ್ಬವನ್ನು ಸರಳವಾಗಿ ಆಚರಿಸಲು ಸಂಘಟನೆಗಳ ಪ್ರಮುಖರು ಭರವಸೆ ನೀಡಿರುವುದಾಗಿ ಅವರು ತಿಳಿಸಿದರು.

ಕಳೆದ ಸಾಲಿನಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿದ್ದ ಸಂಘಗಳು ಈ ಬಾರಿಯೂ ಗಣೇಶನ ಪ್ರತಿಷ್ಠಾಪನೆ ಮಾಡಲು ಜಿಲ್ಲಾಡಲಿತದ ವಿರೋಧವಿಲ್ಲ. ಆದರೆ, ಪ್ರತಿಷ್ಠಾಪಿಸಿದ ದಿನದಿಂದ ಅತ್ಯಂತ ಕಡಿಮೆ ಸಂಖ್ಯೆಯ ಜನರೊಂದಿಗೆ ವಿಸರ್ಜನೆ ಮಾಡುವಂತೆ ಸೂಚಿಸಲಾಗಿದೆ.

ಇಲ್ಲಿ ಯಾವುದೇ ಮೆರವಣಿಗೆಗೆ ಅವಕಾಶವಿರುವುದಿಲ್ಲ. ಬ್ಯಾನರ್, ಬಂಟಿಂಗ್ಸ್ , ಧ್ವನಿ ವರ್ಧಕ ಬಳಸಲು ಅನುಮತಿ ನೀಡಲಾಗುವುದಿಲ್ಲ. ಗಣೇಶನ ವಿಸರ್ಜನೆಗೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ವತಿಯಿಂದ ವಿಸರ್ಜನಾ ವಾಹನ ವ್ಯವಸ್ಥೆ ಮಾಡಲಾಗಿದ್ದು, ನಿಗದಿತ ಸಮಯಕ್ಕೆ ಸಾರ್ವಜನಿಕರ ಮನೆ ಬಾಗಿಲಿಗೆ ಬರಲಿದೆ. ಜನಪರವಾದ ಈ ಕಾರ್ಯದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಸ್ಥಳೀಯ ಸಂಘ, ಸಂಸ್ಥೆಗಳ ಮುಖಂಡರ ಸಭೆ ಕರೆದು ವಾಸ್ತವ ಸ್ಥಿತಿಯ ಮನವರಿಕೆ ಮಾಡಿಕೊಡಲು ಸೂಚಿಸಲಾಗಿದೆ. ಹಬ್ಬದ ಆಚರಣೆಯಲ್ಲಿ ಸಂಭ್ರಮ, ಸ್ಫೂರ್ತಿ ಮತ್ತು ಉತ್ಸಾಹವಿರಲಿ. ಯಾರೊಬ್ಬರೂ ಈ ವಿಷಯವನ್ನು ಪ್ರತಿಷ್ಠೆಯಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದರು.

ಮನೆಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡುವವರು 2 ಅಡಿ ಹಾಗೂ ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮಾಡುವವರು ಗರಿಷ್ಠ 4 ಅಡಿ ಎತ್ತರದ ವಿಗ್ರಹವನ್ನು ಪ್ರತಿಷ್ಠಾಪಿಸಬಹುದಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ.ಕೆ.ಬಿ ಶಿವಕುಮಾರ್, ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಜಿಲ್ಲಾ ಪಂಚಾಯತ್ ಸದಸ್ಯ ಕೆ.ಇ.ಕಾಂತೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜ್ ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.