ಶಿವಮೊಗ್ಗ: ಹೊರ ಗುತ್ತಿಗೆ ರದ್ದುಪಡಿಸಿ ಒಳಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವಂತೆ ಒತ್ತಾಯಿಸಿ ಸಿಮ್ಸ್ ಆಸ್ಪತ್ರೆಯ ಹೊರ ಗುತ್ತಿಗೆ ನೌಕರರು ಕಳೆದ ಆರು ದಿನಗಳಿಂದ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಮಾನ ಕೆಲಸಕ್ಕೆ ಸಮಾನ ವೇತನ, ಹೊರ ಗುತ್ತಿಗೆ ರದ್ದುಪಡಿಸಿ ಒಳಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವಂತೆ ಹಾಗೂ ವಿಧಾನ ಸಭೆ ಅಧಿವೇಶನದಲ್ಲಿ ಈ ಕುರಿತು ಮುಖ್ಯಮಂತ್ರಿಗಳು ಆದೇಶ ಹೊರಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನಿನ್ನೆ ಸಹ ರಕ್ತ ಕ್ರಾಂತಿ ಮೂಲಕ ಪ್ರತಿಭಟನೆ ನಡೆಸುವ ವೇಳೆಯಲ್ಲಿ ಪೊಲೀಸರು ಮತ್ತು ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದು, ತಳ್ಳಾಟ, ನೂಕಾಟ ಸಹ ನಡೆದಿದೆ. ಈ ಸಂಧರ್ಭದಲ್ಲಿ ಹತ್ತಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದರು.
ಆದರೆ, ಇಂದು ಸಹ ಪ್ರತಿಭಟನೆ ಮುಂದುವರಿಸಿದ್ದು, ಯಾವುದೇ ಕಾರಣಕ್ಕೂ ಬೇಡಿಕೆ ಈಡೆರುವವರೆಗೂ ಪ್ರತಿಭಟನೆ ಹಿಂಪಡೆಯಲ್ಲ ಎಂದು ಹೇಳಿದರು. ಕಾರ್ಮಿಕರ ಹೋರಾಟಕ್ಕೆ ಮಹಾನಗರ ಪಾಲಿಕೆ ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ಗಳು ಬೆಂಬಲ ಸೂಚಿಸಿದ್ದಾರೆ.