ಶಿವಮೊಗ್ಗ: ನಾಡಿನ ಪ್ರಸಿದ್ಧ ಯಾತ್ರಾ ಸ್ಥಳ ಸಿಗಂದೂರಿನ ಚೌಡೇಶ್ವರಿ ದೇವಿಯ ದರ್ಶನವನ್ನು ವಾರಾಂತ್ಯದಲ್ಲಿ ಬಂದ್ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತ ಮಂಡಳಿ ಈ ಕ್ರಮ ತೆಗೆದುಕೊಂಡಿದೆ.
ಕೋವಿಡ್ ನಿಯಂತ್ರಣ ಮಾಡುವ ಉದ್ದೇಶದಿಂದ ಜಿಲ್ಲಾಡಳಿತವು ಪ್ರವಾಸಿತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ನಿಗದಿ ಮಾಡಿದೆ. ಇದರಿಂದ ಸಿಗಂದೂರಿಗೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ದೇವಾಲಯದ ಧರ್ಮದರ್ಶಿ ಡಾ.ರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ಕೋವಿಡ್ ನಿಯಮಾವಳಿಯಂತೆ ಭಕ್ತರು ಸಹಕರಿಸಬೇಕಿದೆ. ಆಗಸ್ಟ್ 13ರ ತನಕ ದೇವಾಲಯದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಈ ವೇಳೆ ಬರುವ ಜನರಿಗೆ ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುತ್ತಿದೆ.
ಇದನ್ನೂ ಓದಿ: 'ಐ ಡೋಂಟ್ ಕೇರ್'... ಅಣ್ಣಾಮಲೈ ಮೇಕೆದಾಟು ಸತ್ಯಾಗ್ರಹಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ