ETV Bharat / state

ಕ್ರೀಡೆ ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಪೂರಕ: ಬಿ.ವೈ.ರಾಘವೇಂದ್ರ - BY Raghavendra latest news

ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ವಿಶ್ವವಿದ್ಯಾಲಯಗಳ ಮಟ್ಟದ ಖೋ-ಖೋ ಪಂದ್ಯಾವಳಿಗೆ ಸಂಸದ ಬಿ.ವೈ.ರಾಘವೇಂದ್ರ ಇಂದು ಚಾಲನೆ ನೀಡಿದರು.

Kho-Kho Tournament
ಖೋ-ಖೋ ಪಂದ್ಯಾವಳಿ
author img

By

Published : Dec 28, 2019, 5:49 PM IST

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ಜಾಗತಿಕ ಮಟ್ಟದ ಸ್ಥಾನಮಾನ ಹೊಂದಬೇಕು. ಅದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅಗತ್ಯ ನೆರವು, ಸಹಕಾರ ಕೊಡಿಸುವುದಾಗಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಖೋ-ಖೋ ಪಂದ್ಯಾವಳಿಗೆ ಚಾಲನೆ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಇಂದು ನಡೆದ ದಕ್ಷಿಣ ವಲಯ ವಿಶ್ವವಿದ್ಯಾಲಯಗಳ ಮಟ್ಟದ ಖೋ-ಖೋ ಪಂದ್ಯಾವಳಿಯನ್ನು ಬಲೂನ್ ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದಕ್ಷಿಣ ವಲಯ ಅಂತರ್​​ ವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ವಿವಿಗಳ 50 ಅಧಿಕಾರಿಗಳೊಂದಿಗೆ 16 ತಂಡಗಳ 200ಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಕ್ರೀಡೆ ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಪೂರಕವಾಗಿದೆ. ಅತಿ ಹೆಚ್ಚು ಯುವಶಕ್ತಿ ಹೊಂದಿದ ರಾಷ್ಟ್ರ ನಮ್ಮದಾಗಿದ್ದು, ಈ ದೇಶದ ಭವಿಷ್ಯ ಯುವಜನತೆಯನ್ನು ಅವಲಂಬಿಸಿದೆ ಎಂದರು.

ಕುವೆಂಪು ವಿಶ್ವವಿದ್ಯಾಲಯವು ದೇಶದ ಹಲವು ಪ್ರತಿಷ್ಠಿತ ವಿವಿಗಳಲ್ಲಿ ಗುರುತಿಸುವ ಸ್ಥಾನಮಾನ ಹೊಂದಿರುವುದು ಹರ್ಷದ ಸಂಗತಿಯಾಗಿದೆ. ವಿವಿಯು ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿರುವುದು ವಿಶೇಷವಾಗಿದೆ. ಅಂತೆಯೇ ದಶಕಗಳ ನಂತರ ದಕ್ಷಿಣ ವಲಯ ಮಟ್ಟದ ಖೋ-ಖೋ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು.

ವಿವಿಯಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೇವಲ ಪ್ರಮಾಣಪತ್ರಕ್ಕಾಗಿ ಓದದೇ ಭವಿಷ್ಯದ ಭವ್ಯ ಬದುಕಿನ ಬಗ್ಗೆಯೂ ಯೋಚಿಸಬೇಕಾದ ಅಗತ್ಯವಿದೆ ಎಂದ ಅವರು, ಪ್ರಧಾನಿ ಮೋದಿಯವರ ಫಿಟ್ ಇಂಡಿಯಾ ಕಲ್ಪನೆ, ವ್ಯಕ್ತಿ ಹಾಗೂ ದೇಶದ ವಿಕಾಸಕ್ಕೆ ಹೊಸ ಭಾಷ್ಯ ಬರೆದಂತಾಗಿದೆ ಎಂದರು.

ಕ್ರೀಡಾಕೂಟದಲ್ಲಿ ವಿವಿಯ ಕುಲಪತಿ ಡಾ. ಬಿ.ಪಿ.ವೀರಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ವಿವಿ ರಿಜಿಸ್ಟ್ರಾರ್ ಡಾ. ಎಸ್.ಎಸ್.ಪಾಟೀಲ್, ಅರ್ಜುನ ಪ್ರಶಸ್ತಿ ವಿಜೇತ ಕ್ರೀಡಾಪಟು ಶೋಭಾ ನಾರಾಯಣ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Intro:ವೆಂಪು ವಿವಿ ಜಾಗತಿಕ ಮಟ್ಟದ ಸ್ಥಾನಮಾನ ಹೊಂದಬೇಕು : ಬಿ.ವೈ.ರಾಘವೇಂದ್ರ

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯ ಜಾಗತಿಕ ಮಟ್ಟದ ಸ್ಥಾನಮಾನ ಹೊಂದಬೇಕು. ಅದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅಗತ್ಯ ನೆರವು, ಸಹಕಾರ ಕೊಡಿಸುವುದಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಇಂದು ನಡೆದ ದಕ್ಷಿಣ ವಲಯ ವಿಶ್ವವಿದ್ಯಾಲಯಗಳ ಮಟ್ಟದ ಖೋ-ಖೋ ಪಂದ್ಯಾವಳಿಯನ್ನು ಬಲೂನ್ ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ವಿವಿಗಳ 50 ಅಧಿಕಾರಿಗಳೊಂದಿಗೆ 16 ತಂಡಗಳ 200ಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಖೋ-ಖೋ ಕ್ರೀಡೆಯು ಸರಳ, ಬೌದ್ಧಿಕ ಕೌಶಲ್ಯ ಹೆಚ್ಚಿಸುವ ಹಾಗೂ ಮನರಂಜನೆಯ ಆಟವಾಗಿದೆ. ಯಾವುದೇ ಕ್ರೀಡೆ ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಪೂರಕವಾಗಿದೆ. ಯುವ ಸಮೂಹದ ಸದ್ಬಳಕೆಯಾಗಬೇಕಾದರೆ ಸದೃಢ ಮನಸ್ಸುಗಳು ತಯಾರಾಗಬೇಕು. ಸದೃಢ ಮನಸ್ಸುಗಳು ಆರೋಗ್ಯಕರ ದೇಹದಲ್ಲಿ ಕಾಣಲು ಸಾಧ್ಯ ಎಂದರು.Body:
ಅತಿಹೆಚ್ಚು ಯುವಶಕ್ತಿ ಹೊಂದಿದ ರಾಷ್ಟ್ರ ನಮ್ಮದಾಗಿದ್ದು, ಈ ದೇಶದ ಭವಿಷ್ಯ ಯುವಜನತೆಯನ್ನು ಅವಲಂಬಿಸಿದೆ ಎಂದರು.
ಕುವೆಂಪು ವಿಶ್ವವಿದ್ಯಾಲಯವು ದೇಶದ ಹಲವು ಪ್ರತಿಷ್ಠಿತ ವಿವಿಗಳಲ್ಲಿ ಗುರುತಿಸುವ ಸ್ಥಾನಮಾನ ಹೊಂದಿರುವುದು ಹರ್ಷದ ಸಂಗತಿಯಾಗಿದೆ ಎಂದರು. ಕುವೆಂಪು ವಿವಿಯು ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿರುವುದು ವಿಶೇಷವಾಗಿದೆ. ಅಂತೆಯೆ ದಶಕಗಳ ನಂತರ ದಕ್ಷಿಣ ವಲಯ ಮಟ್ಟದ ಖೋ-ಖೋ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು. ವಿವಿಯಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೇವಲ ಪ್ರಮಾಣಪತ್ರಕ್ಕಾಗಿ ಓದದೇ ಭವಿಷ್ಯದ ಭವ್ಯ ಬದುಕಿನ ಬಗ್ಗೆಯೂ ಯೋಚಿಸಬೇಕಾದ ಅಗತ್ಯವಿದೆ ಎಂದ ಅವರು ದೇಶದ ಪ್ರಧಾನಿ ಮೋದಿಯವರ ಫಿಟ್ ಇಂಡಿಯಾ ಕಲ್ಪನೆ ವ್ಯಕ್ತಿ ಹಾಗೂ ದೇಶದ ವಿಕಾಸಕ್ಕೆ ಹೊಸ ಭಾಷ್ಯ ಬರೆದಂತಾಗಿದೆ ಎಂದರು.Conclusion:ಕ್ರೀಡಾಕೂಟದಲ್ಲಿ ವಿವಿಯ ಕುಲಪತಿ ಡಾ. ಬಿ.ಪಿ.ವೀರಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ವಿವಿ ರಿಜಿಸ್ಟ್ರಾರ್ ಡಾ.ಎಸ್.ಎಸ್.ಪಾಟೀಲ್, ಅರ್ಜುನ ಪ್ರಶಸ್ತಿ ವಿಜೇತ ಕ್ರೀಡಾಪಟು ಶ್ರೀಮತಿ ಶೋಭಾ ನಾರಾಯಣ್, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ, ವೆಂಕಟೇಶ್ವರಲು, ಎಸ್.ಎಂ.ಪ್ರಕಾಶ್, ಜ್ಯೋತಿಪ್ರಕಾಶ್, ಎನ್.ಡಿ.ವಿರೂಪಾಕ್ಷ, ಪ್ರೊ.ರಮೇಶ್, ಕಾಂತರಾಜು ಮುಂತಾದ ಗಣ್ಯರು ಉಪಸ್ಥಿತರಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.