ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖರಾಗಲೇಂದು ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಶರಾವತಿ ನಗರದ ಕಾಲ ಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ರಾಜ್ಯದಲ್ಲಿ ಕೊರೊನಾ ಕಂಡು ಬಂದ ನಂತರದಲ್ಲಿ ಅನೇಕ ರಾಜಕೀಯ ವ್ಯಕ್ತಿಗಳಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ. ಅದರಂತೆ ಡಿ.ಕೆ.ಶಿವಕುಮಾರ್ ಕೂಡ ಆದಷ್ಟು ಬೇಗ ಗುಣಮುಖರಾಗಿ ರಾಜ್ಯದ ಜನರ ಸೇವೆ ಮಾಡಲಿ ಎಂದು ವಿಶೇಷ ಪೂಜೆ ಸಲ್ಲಿಸಲಾಯಿತು.