ETV Bharat / state

ಫೆ.21 ಕ್ಕೆ ಶಿವಮೊಗ್ಗಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಭೇಟಿ: ಸಂಸದ ರಾಘವೇಂದ್ರ - ಕ್ರೀಡಾಂಗಣದ ಶಂಕುಸ್ಥಾಪನೆ ಮಾಡಲಿರುವ ಕಿರಣ್ ರಿಜಿಜು

ಫೆಬ್ರವರಿ‌ 21ಕ್ಕೆ‌‌ ಶಿವಮೊಗ್ಗಕ್ಕೆ ಆಗಮಿಸಲಿರುವ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, 4 ಕೋಟಿ ರೂ. ವೆಚ್ಚದ ಕ್ರೀಡಾಂಗಣದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ರಾಘವೇಂದ್ರ ಹೇಳಿದ್ದಾರೆ.

b y raghavendra
b y raghavendra
author img

By

Published : Feb 16, 2021, 5:33 PM IST

ಶಿವಮೊಗ್ಗ: ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಫೆಬ್ರವರಿ‌ 21ಕ್ಕೆ‌‌ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು‌ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. 21ರ ಬೆಳಗ್ಗೆ ದೆಹಲಿಯಿಂದ ಹೊರಟು, ಬೆಂಗಳೂರಿಗೆ ಆಗಮಿಸಿ, ಅಲ್ಲಿಂದ ಹೆಲಿಕ್ಯಾಪ್ಟರ್​ನಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.

ಅಂದು ಶಿವಮೊಗ್ಗ ಸ್ಮಾರ್ಟ್ ಸಿಟಿಯಡಿಯಲ್ಲಿ ನಿರ್ಮಾಣವಾಗಲಿರುವ 4 ಕೋಟಿ ರೂ. ವೆಚ್ಚದ ಕ್ರೀಡಾಂಗಣದ ಶಂಕುಸ್ಥಾಪನೆ ಮಾಡಲಿದ್ದಾರೆ. ಈಗಾಗಲೇ ಶಿವಮೊಗ್ಗದಲ್ಲಿ ಇರುವ ನೆಹರು ಕ್ರೀಡಾಂಗಣ ಸಣ್ಣದಾಗಿರುವ ಕಾರಣ ಇನ್ನೂಂದು ಕ್ರೀಡಾಂಗಣದ ಅವಶ್ಯಕವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ‌ ಕ್ರೀಡಾ ಸಚಿವರು ಆಗಮಿಸಲಿದ್ದಾರೆ.

ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

ಅಲ್ಲದೆ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ 4 ಕೋಟಿ ರೂ. ನೀಡಿದ್ದಾರೆ. ಇದರ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ ಎಂದರು. ಅಲ್ಲದೇ ವಿಶೇಷ ಕ್ರೀಡಾ ವಲಯದಕ್ಕೆ ಬೇಕಾದ ಜಾಗವನ್ನು ಸಹ ಅಂದೇ ಪರಿಶೀಲಿಸಲಿದ್ದಾರೆ. ಈ ವೇಳೆ ಕೇಂದ್ರದ ಸಚಿವರ ಜೊತೆ ಕೇಂದ್ರ ಹಾಗೂ ರಾಜ್ಯದ ಕ್ರೀಡಾ‌ ಇಲಾಖೆಯ ಅಧಿಕಾರಿಗಳು ಹಾಜರಿರಲಿದ್ದು, ಅಂದೇ ಅವರ ಜೊತೆ ಶಿವಮೊಗ್ಗದಲ್ಲಿ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.