ಶಿವಮೊಗ್ಗ: ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಉಡುಗೆ ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಸಂಭ್ರಮದಿಂದ ಸಿನೆಮಾ ಹಾಡುಗಳಿಗೆ ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದರು.
ಕಳೆದ ವರ್ಷದಿಂದ ಕೊರೊನಾ ಮಹಾಮಾರಿಯಿಂದಾಗಿ ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಂದ ದೂರ ಉಳಿದಿದ್ದರು. ಕೊರೊನಾ ಸ್ವಲ್ಪ ಮಟ್ಟಿಗೆ ನಿಯಂತ್ರಣಗೊಂಡ ಹಿನ್ನೆಲೆ, ಸರ್ಕಾರ ಶಾಲಾ - ಕಾಲೇಜುಗಳನ್ನು ಪ್ರಾರಂಭಿಸಿದೆ. ಹಾಗಾಗಿ ವಿದ್ಯಾರ್ಥಿಗಳು - ಕಾಲೇಜಿನವರು ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಸಿನೆಮಾ ಹಾಡುಗಳಿಗೆ ಕುಣಿದು ಕುಪ್ಪಳಿಸಿದ್ದಾರೆ. ವಿದ್ಯಾರ್ಥಿಗಳ ಸಂಭ್ರಮವನ್ನು ಶಿಕ್ಷಕರು ಸಾಥ್ ನೀಡಿದ್ದಾರೆ.
ಗಮನ ಸೆಳೆ ವಿದ್ಯಾರ್ಥಿಗಳ ಉಡುಗೆ:
ಸಾಂಸ್ಕೃತಿಕ ಕಾರ್ಯಕ್ರಮ ಆಗಿರುವ ಹಿನ್ನೆಲೆ, ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಶೈಲಿಯ ಉಡುಗೆಗಳನ್ನು ಧರಿಸಿಕೊಂಡು ಒಂದಿದ್ದರು. ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಪಟ್ಟರು. ಕಾರ್ಯಕ್ರಮದಲ್ಲಿ ಎಲ್ಲ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.
ಇದನ್ನೂ ಓದಿ: ಅಪಾರ್ಟ್ಮೆಂಟ್ನಲ್ಲಿ ಅಗ್ನಿ ದುರಂತ: ಸ್ಫೋಟಕ್ಕೆ ಕಾರಣ ಪತ್ತೆ ಹಚ್ಚುತ್ತಿರುವ ತಜ್ಞರ ತಂಡ