ಶಿವಮೊಗ್ಗ: ಶಿವಮೊಗ್ಗ ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಭೂಮಿಯನ್ನು ಕಳೆದುಕೊಂಡ ಸಂತ್ರಸ್ತ ರೈತರೊಂದಿಗೆ ಶಿವಮೊಗ್ಗದ ಪರಿವೀಕ್ಷಣೆ ಮಂದಿರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸಭೆ ನಡೆಸಿದ್ದರು.
ಸಂತ್ರಸ್ತ ರೈತರ ಸಮಸ್ಯೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರವನ್ನು ಒದಗಿಸುವ ಪ್ರಯತ್ನ ಮಾಡುವುದಾಗಿ ಅವರು ರೈತರಿಗೆ ಭರವಸೆ ನೀಡಿದ್ದರು.
ಈ ಸಂದರ್ಭದಲ್ಲಿ ಶಾಸಕರಾದ ಅಶೋಕ್ ನಾಯಕ್, ಜಿಲ್ಲಾಧಿಕಾರಿ ಶಿವಕುಮಾರ್, ಇತರ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.