ETV Bharat / state

ಸಿಗಂದೂರು ದೇವಿಯ ದರ್ಶನ ಪಡೆದ ಸುಪ್ರೀಂಕೋರ್ಟ್ ನ್ಯಾ.ಬಿ.ವಿ.ನಾಗರತ್ನ ದಂಪತಿ - supreme court judge BV Nagaratna temple visit

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಬಿ.ವಿ.ನಾಗರತ್ನ ದಂಪತಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

supreme-court-judge-bv-nagaratna-temple-visit
ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು
author img

By

Published : Jun 20, 2022, 4:04 PM IST

ಶಿವಮೊಗ್ಗ: ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿಂದು ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ನಿನ್ನೆ ಸಂಜೆ ಜಿಲ್ಲೆಗೆ ಆಗಮಿಸಿದ ಅವರು, ಎರಡು ದಿನಗಳ ಕಾಲ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ ಸಿಗಂದೂರಿಗೆ ಆಗಮಿಸಿ ಚೌಡೇಶ್ವರಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.‌ ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ರಾಮಪ್ಪ ದೇವಾಲಯದ ಪರಿಚಯ ಹಾಗೂ ದೇವಿಯ ಮಹಿಮೆಯನ್ನು ವಿವರಿಸಿದರು. ನಂತರ ಬಿ.ವಿ.ನಾಗರತ್ನ ದಂಪತಿಗೆ ದೇವಾಲಯದ ವತಿಯಿಂದ ಸನ್ಮಾನಿಸಲಾಯಿತು. ಚೌಡೇಶ್ವರಿ ದೇವಿಯ ದರ್ಶನ ಪಡೆದ ದಂಪತಿ ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ತೆರಳಿದ್ದು, ಸಂಜೆ ಶಿವಮೊಗ್ಗಕ್ಕೆ ವಾಪಸ್ಸಾಗಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ ಹಾಸನ ಜಿಲ್ಲೆ ಅರಸಿಕೆರೆಗೆ ಪ್ರಯಾಣ ಬೆಳೆಸುವರು.

ಇದನ್ನೂ ಓದಿ: ರಾಜಧಾನಿಗೆ ಆಗಮಿಸಿದ ಪ್ರಧಾನಿ ಮೋದಿ: 33 ಸಾವಿರ ಕೋಟಿ ರೂ.ಯೋಜನೆಗಳಿಗೆ ಚಾಲನೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.